ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಿ: ವಿವಾದದಲ್ಲಿ ರಮಾನಾಥ ರೈ
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ...

Published On :
ಮಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಜಿಲ್ಲೆ ಎಸ್‌ಪಿ ಭೂಷಣ್ ಜಿ. ಬೊರಸೆ ಅವರಿಗೆ ತಾಕೀತು ಮಾಡುತ್ತಿರುವ ವಿಡಿಯೊ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಪ್ರಭಾಕರ ಭಟ್ ವಿರುದ್ಧ ತೀವ್ರ ಟೀಕೆ ಮಾಡಿರುವ ಸಚಿವರು, ' ಭಾಷಣ ಮಾಡಿದರೆ ಕೇಸು ಹಾಕಿ. 307 ಕೇಸ್ ಹಾಕಿ. ಅವ ಪುಕ್ಕಲ. ಹೆದರಿ ಓಡುತ್ತಾನೆ. ಅವನನ್ನು ಜೈಲಿಗೆ ಕಳುಹಿಸಿದರೆ ಹೊರಗೆ ಬರುವುದಿಲ್ಲ. ಅವನ ಹಿಂದೆ ಯಾರೂ ಬರುವುದಿಲ್ಲ. ಹೆದರಿ ಓಡುತ್ತಾರೆ' ಎಂದು ರೈ ಅವರು ಎಸ್‌ಪಿ ಅವರಿಗೆ ಹೇಳುತ್ತಿರುವುದು ವಿಡಿಯೊದಲ್ಲಿದೆ.
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕದಲ್ಲಿ ನಡೆಯುತ್ತಿರುವ ಗಲಭೆಗಳಿಗೆ ಸಂಬಂಧಿಸಿದಂತೆ ಕಲ್ಲಡ್ಕ ಪ್ರಭಾಕರ್ ಭಟ್ ಪ್ರಚೋದನಕಾರಿ ಭಾಷಣ ಮಾಡಿದರೇ 307 ಅಡಿ (ಕೊಲೆಯತ್ನ) ಕೇಸು ದಾಖಲಿಸಿ ಎಂದು ಸೂಚಿಸಿದ್ದಾರೆ.
ರಮಾನಾಥ ರೈ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ರೈ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ, ಇದಕ್ಕೆ ದಕ್ಷಿಣ ಕನ್ನಡದಲ್ಲಿ ಪದೇ ಪದೇ ನಡೆಯುತ್ತಿರುವ ಹಿಂಸಾಚಾರಗಳೇ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.
ಕಳೆದ ಒಂದು ತಿಂಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ, ಕೊಲೆ, ಕೋಮು ಗಲಭೆ ಗಳು ನಿರಂತರವಾಗಿ ನಡೆಯುತ್ತಿವೆ, ಕರ್ಫ್ಯೂ ಹೇರಲಾಗುತ್ತಿದೆ, ಕಲ್ಲಡ್ಕ ಪ್ರಭಾಕರ್ ಮುಗ್ಧ ಆತನ ವಿರುದ್ಧ ಸಂಚು ನಡೆಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
videoವಿಡಿಯೋರಮಾನಾಥ ರೈRamanath RaiKalladka Prabhakar Bhatಕಲ್ಲಡ್ಕ ಪ್ರಭಾಕರ್ ಭಟ್Nalin Kumar Kateelನಳಿನ್ ಕುಮಾರ್ ಕಟೀಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


