ರಾಜಕೀಯ

ಮೋದಿ ಆಡಳಿತದಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣ: ದೇವೇಗೌಡ

ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ತುರ್ತುಪರಿಸ್ಥಿತಿಯಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ...

ಮೋದಿ ಆಡಳಿತದಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣ: ದೇವೇಗೌಡ
ಎಚ್.ಡಿ ದೇವೇಗೌಡ
Published On :
ಬೆಂಗಳೂರು: ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ  ತುರ್ತುಪರಿಸ್ಥಿತಿಯಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಆರೋಪಿಸಿದ್ದಾರೆ.
ತುರ್ತು ಪರಿಸ್ಥಿತಿ ವಿರೋಧಿ ದಿನ’ದ ಪ್ರಯುಕ್ತ ಲೋಕನಾಯಕ ಜೆ.ಪಿ. ವಿಚಾರ ವೇದಿಕೆ ಹಾಗೂ ಯುನೈಟೆಡ್‌ ಲಾಯರ್ಸ್‌ ಫೋರಂ ಆಶ್ರಯದಲ್ಲಿ ನಡೆದ  ಭಾರತದ ಪ್ರಜಾಪ್ರಭುತ್ವ ಅಂದು–ಇಂದು ಕಾರ್ಯಕ್ರಮದಲ್ಲಿ  ನರೇಂದ್ರ- ಮೋದಿ ಡೊನಾಲ್ಡ್ ಟ್ರಂಪ್ ಭೇಟಿ ಬಗ್ಗೆ ಮಾತನಾಡಿದ ಅವರು, ಮೋದಿ ಅಮೆರಿಕಾದ ಸಾಧನವಾಗಿದ್ದಾರೆ. ದೇಶದ ಮಾಧ್ಯಮಗಳ ಮೇಲೆ ಕಾರ್ಪೊರೇಟ್‌ ಸಂಸ್ಥೆಗಳು ಹಿಡಿತ ಹೊಂದಿವೆ. ಇಂತಹ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಬೇಕಿಲ್ಲ ಎಂದು ಹೇಳಿದರು. 
ಮಹಾದಾಯಿ, ಕಾವೇರಿ ನದಿ ವಿವಾದದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದಿಂದ ನ್ಯಾಯ ಸಿಗುವ ನಂಬಿಕೆ ಇಲ್ಲ.  ನಮ್ಮ ಪಾಲಿನ ನೀರು ಸಿಗುತ್ತಿಲ್ಲ. ರೈಲ್ವೆ, ಹೆದ್ದಾರಿ, ನೀರಾವರಿ ವಿಷಯಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಕರ್ನಾಟಕವು ತಬ್ಬಲಿ ರಾಜ್ಯ ಎಂದು ವಿಷಾದ ವ್ಯಕ್ತಪಡಿಸಿದರು.
ಸ್ವಾರ್ಥಕ್ಕಾಗಿ ನಾನು ರಾಜಕಾರಣ ಮಾಡುವುದಿಲ್ಲ. ಎಂತಹ ಪರಿಸ್ಥಿತಿಯಲ್ಲೂ ಹಿಂದೆ ತಿರುಗಿ ನೋಡದೆ, ಮುಂದೆ ಹೆಜ್ಜೆ ಇಡುತ್ತೇನೆ ಎಂದರು. ಬಿಜೆಪಿ ತನ್ನ ಶಕ್ತಿಯನ್ನು ವೃದ್ಧಿಸಿಕೊಳ್ಳಲು ಯಾರನ್ನು ಬೇಕಾದರೂ ಬಳಸಿಕೊಂಡು, ಬಳಿಕ ಅವರನ್ನು ನಿಷ್ಕ್ರಿಯರನ್ನಾಗಿ ಮಾಡುತ್ತದೆ. ಅದು ವ್ಯಕ್ತಿಗಳನ್ನು ಸೆಳೆದು ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತದೆ.ಈ ಹಿಂದೆ ರಾಮಕೃಷ್ಣ ಹೆಗಡೆ ಜೊತೆ ಸೇರಿ ಪರಿಸ್ಥಿತಿಯ ಅನುಕೂಲ ಪಡೆದುಕೊಂಡರು ಎಂದು ದೂರಿದರು. 
ಇದೇ ವೇಳೆ ಮಾತನಾಡಿದ ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ಸಹೋದರ , ಮೈಕೆಲ್ ಫರ್ನಾಂಡೀಸ್, ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ನಡೆದ ಘಟನೆಗಳ ಬಗ್ಗೆ ಮಾಹಿತಿ ತಿಳಿಸಿಕೊಡಲಾಗುವುದು, ಇದು ನಮ್ಮ ಎರಡನೇ ಸ್ವಾತಂತ್ರ್ಯ ಹೋರಾಟ ಎಂದು ಹೇಳಿದರು
ಸಾಹಿತಿ ಚಂದ್ರಶೇಖರ್ ಪಾಟೀಲ್ ಮಾತನಾಡಿ, ರಾಷ್ಟ್ರಪತಿ ಸ್ಥಾನಕ್ಕೆ ದಲಿತ ಮತ್ತು ದಲಿತರ ನಡುವೆ ಫೈಟ್ ನಡೆದಿದೆ. ರಾಮನಾಥ್ ಕೋವಿಂದ್ ರಾಷ್ಟ್ರಪತಿಯಾದರೇ ಜಾತಿ ತಾರತಮ್ಯ, ಧಾರ್ಮಿಕ ಸ್ವಾತಂತ್ರ್ಯ ನಿಗ್ರಹವನ್ನು ಪ್ರತಿನಿಧಿಸುತ್ತಾರೆ,  ಮೀರಾ ಕುಮಾರ್ ರಾಷ್ಟ್ರಪತಿಯಾದರೇ ಪ್ರಜಾಪ್ರಭುತ್ವ ಮತ್ತು ಮಾನವೀಯತೆಯನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದಾರೆ.
ಶಕ್ತಿಶಾಲಿ ವ್ಯಕ್ತಿತ್ವದವರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಡುತ್ತಾರೆ. ದುರ್ಬಲ ವ್ಯಕ್ತಿತ್ವದವರು ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ.ನಾಡಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.