ಎಸ್ ಎಂಕೆ ಆಪ್ತ ಶಿವಲಿಂಗಯ್ಯರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ ಸಿಎಂ
ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಪ್ತ ಶಿವಲಿಂಗಯ್ಯ ಅವರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ...

ಮೈಸೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆಪ್ತ ಶಿವಲಿಂಗಯ್ಯ ಅವರನ್ನು ಕಾಡಾ ಅಧ್ಯಕ್ಷ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ವಜಾಗೊಳಿಸಿದ್ದಾರೆ.
CADA ದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ರಾಜ್ಯ ಸರ್ಕಾರ ಕಾಂಗ್ರೆಸ್ ಮುಖಂಡ ನಂಜಪ್ಪ ಅವರನ್ನು ನೇಮಕ ಮಾಡಿದೆ. 2013 ರಲ್ಲಿ ಕಾಂಗ್ರೆಸ್ ಸೇರ್ಪಡೆಗೂ ಮುನ್ನ ನಂಜಪ್ಪ ಎರಡು ವಿಧಾನ ಸಭೆ ಚುನಾವಣೆಯಲ್ಲಿ ಎಚ್ ಎಸ್ ಮಹಾದೇವ ಪ್ರಸಾದ್ ವಿರುದ್ಧ ಸ್ಪರ್ದಿಸಿದ್ದರು.
ಪ್ರಮುಖ ವೀರಶೈವ ಮುಖಂಡರಾಗಿರುವ ನಂಜಪ್ಪ ಅವರನ್ನು ಜೆಡಿಎಸ್ ಮತ್ತು ಬಿಜೆಪಿ ತಮ್ಮೆಡೆದೆ ಸೆಳೆಯಬಹುದೆಂಬ ಭಯದಿಂದಾಗಿ ಕಾಂಗ್ರೆಸ್ ನಂಜಪ್ಪ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಿದೆ, ಇದು ಉಪ ಚುನಾವಣೆಯಲ್ಲಿ ಗೀತಾ ಮಹದೇವ್ ಪ್ರಸಾದ್ ಅವರ ಗೆಲುವಿಗೆ ಕಾರಣವಾಗಲಿದೆ ಎಂಬ ಲೆಕ್ಕಾಚಾರದೊಂದಿಗೆ ಅವರನ್ನು ' ಕಾಡಾ' ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಗುಂಡ್ಲುಪೇಟೆ ವಿಧಾನ ಸಭೆ ಉಪ ಚುನಾವಣೆಯ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಗೀತಾ ಮಹಾದೇವ ಪ್ರಸಾದ್ ಈಗಾಗಲೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಭಾಗವಹಿಸಿ ಜನರನ್ನು ಭೇಟಿ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


