ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರುತ್ತಿದ್ದೇವೆ: ಎಚ್.ಸಿ.ಬಾಲಕೃಷ್ಣ
ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರುತ್ತಿದ್ದೇವೆ ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಬಂಡಾಯ ಶಾಸಕ...

Published On :
ಬೆಂಗಳೂರು: ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರುತ್ತಿದ್ದೇವೆ ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಶುಕ್ರವಾರ ಹೇಳಿದ್ದಾರೆ.
ಜೆಡಿಎಸ್ ಬಂಡಾಯ ಶಾಸಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದರು. ಸಿಎಂ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ ಅವರು, ನಾವು ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದು, ಚುನಾವಣೆ ಸಮೀಪ ಬಂದಾಗ ಅಧಿಕೃತವಾಗಿ 'ಕೈ' ಹಿಡಿಯುವುದಾಗಿ ಹೇಳಿದ್ದಾರೆ.
ಇನ್ನು ಸಿಎಂ ಭೇಟಿ ಬಳಿಕ ಮಾತನಾಡಿದ ಮತ್ತೊಬ್ಬ ಜೆಡಿಎಸ್ ಬಂಡಾಯ ಶಾಸಕ ಚೆಲುವರಾಯಸ್ವಾಮಿ ಅವರು, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ಆದರೆ ರಾಜಕೀಯವಾಗಿ ಅವರಿಂದ ದೂರವಾಗಲು ನಿರ್ಧರಿಸಿದ್ದೇವೆ ಎಂದರು. ಅಲ್ಲದೆ ಯಾವಾಗ ಕಾಂಗ್ರೆಸ್ ಸೇರಬೇಕು ಎಂಬುದರ ಬಗ್ಗೆ ಕ್ಷೇತ್ರದ ಜನತೆಯೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಜೆಡಿಎಸ್ ಬಂಡಾಯ ಶಾಸಕರಾದ ಎನ್ ಚೆಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್ ಹಾಗೂ ಅಖಂಡ ಶ್ರೀನಿವಾಸ್ ಮೂರ್ತಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮುಂದಿನ ಚುನಾವಣೆಯಲ್ಲಿ ತಮಗೆ ಕಾಂಗ್ರೆಸ್ ನೀಡುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


