ರಾಜಕೀಯ ನಾಯಕರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ, ವಿಕೃತಿ: ಯಡ್ಡಿಗೆ ಈಶ್ವರಪ್ಪ ಟಾಂಗ್
ರಾಜಕೀಯ ನಾಯಕರೊಬ್ಬರ ಕಾಲಿಗೆ ಕಾರ್ಯಕರ್ತರು ಬೀಳುವುದು ಸಂಸ್ಕೃತಿಯಲ್ಲ, ಅದೊಂದು ದೊಡ್ಡ ವಿಕೃತಿ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್'ನ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜಕೀಯ ನಾಯಕರೊಬ್ಬರ ಕಾಲಿಗೆ ಕಾರ್ಯಕರ್ತರು ಬೀಳುವುದು ಸಂಸ್ಕೃತಿಯಲ್ಲ, ಅದೊಂದು ದೊಡ್ಡ ವಿಕೃತಿ ಎಂದು ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್'ನ ವಿರೋಧ ಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಬುಧವಾರ ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸುತ್ತಿದ್ದ ವಿಚಾರ ವೈರಲ್ ಆಗುತ್ತಿದ್ದಂತೆಯೇ ಇತ್ತ ಈ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಟಾಂಗ್ ನೀಡಿರುವ ಈಶ್ವರಪ್ಪ ಅವರು, ರಾಜಕೀಯ ನಾಯಕರೊಬ್ಬರ ಕಾಲಿಗೆ ಬೀಳುವುದು ಸಂಸ್ಕೃತಿಯಲ್ಲ, ಅದೊಂದು ವಿಕೃತಿ ಎಂದು ಟೀಕಿಸಿದರು. ಬೆಂಗಳೂರಿನ ಆನೇಕಲ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, "ಬಿಜೆಪಿ ಕಾರ್ಯಕರ್ತರು ಯಾವ ದೃಷ್ಟಿಯಿಂದ ಅವರ ಕಾಲಿಗೆ ಬಿದ್ದಿದ್ದಾರೋ ಗೊತ್ತಿಲ್ಲ. ಸ್ಥಾನಮಾನ ಪಡೆಯುವ ದೃಷ್ಟಿಯಿಂದ ಹೀಗೆ ಮಾಡಿದ್ದರೆ ಅದು ಖಂಡಿತಾ ತಪ್ಪು. ಆದರೆ ಯಡಿಯೂರಪ್ಪ ಅವರು ಹಿರಿಯರೆಂಬ ಕಾರಣದಿಂದ ಅವರ ಕಾಲಿಗೆ ಬಿದ್ದಿದ್ದರೆ ಅದು ಅವರ ವೈಯಕ್ತಿಕ ವಿಚಾರ" ಎಂದು ಹೇಳಿದರು.
ಇದೇ ವೇಳೆ ಬಿಜೆಪಿಯಲ್ಲಿ ಈಗಲೂ ಎಲ್ಲವೂ ಸರಿಯಿಲ್ಲ ಎಂಬ ವಿಚಾರವನ್ನು ಒಪ್ಪಿಕೊಂಡ ಈಶ್ವರಪ್ಪ ಅವರು, ಪಕ್ಷದಲ್ಲಿ ಈಗಲೂ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳಿವೆ ಎಂದು ಈಶ್ವರಪ್ಪ ತಿಳಿಸಿದರು.
ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ಎರಗಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


