ರಾಜಕೀಯ

ಉತ್ತರ ಪ್ರದೇಶದ ಕದನ ಮುಗಿಯಿತು, ಬಿಜೆಪಿ ಚಿತ್ತ ಈಗ ಕರ್ನಾಟಕದತ್ತ

ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರಗಳಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆಯುತ್ತಿರುವ...

ಉತ್ತರ ಪ್ರದೇಶದ ಕದನ ಮುಗಿಯಿತು, ಬಿಜೆಪಿ ಚಿತ್ತ ಈಗ ಕರ್ನಾಟಕದತ್ತ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
Published On :
ಬೆಂಗಳೂರು: ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಣಿಪುರಗಳಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆಯುತ್ತಿರುವ ಸಂದರ್ಭದಲ್ಲಿ ಇದೀಗ ಕರ್ನಾಟಕದತ್ತ ಬಿಜೆಪಿ ತನ್ನ  ದೃಷ್ಟಿಯನ್ನು ಹರಿಸಿದೆ. ನರೇಂದ್ರ ಮೋದಿ-ಅಮಿತ್ ಶಾ ಜೋಡಿ 2019ರ ಲೋಕಸಭೆ ಚುನಾವಣೆಗೆ ಪಕ್ಷದ ಯೋಜನೆಯನ್ನು ಸಿದ್ದಪಡಿಸುತ್ತಿರುವುದರ ಮಧ್ಯೆ ಮಿಷನ್ ಕರ್ನಾಟಕ ಹೆಸರಿನಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದರತ್ತ ಚಿತ್ತ ಹರಿಸಿದೆ.
2019ರ ಲೋಕಸಭೆ ಚುನಾವಣೆಯನ್ನು ಗೆಲ್ಲುವುದರೊಂದಿಗೆ ಮೋದಿ ಆಡಳಿತ ಯುಗವನ್ನು ಮತ್ತೆಯೂ ಮುಂದಕ್ಕೆ ಕೊಂಡೊಯ್ಯುವ ಯೋಜನೆಯಲ್ಲಿ ಪಕ್ಷವಿದೆ. ಮುಂದಿನ ವರ್ಷ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಮಹತ್ವವೆಂದು ಪರಿಗಣಿಸಿದ್ದು ದಕ್ಷಿಣ ಭಾರತದಲ್ಲಿ ಪಕ್ಷದ ಅಧಿಪತ್ಯವನ್ನು ಸ್ಥಾಪಿಸಲು ಶತಾಯಗತಾಯ ಪ್ರಯತ್ನಿಸುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಬಜೆಟ್ ಅಧಿವೇಶನಕ್ಕೆ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 1,600 ಕೋಟಿ ರೂಪಾಯಿಗಳ ಹಗರಣವನ್ನು ಬಯಲಿಗೆಳೆಯುವುದಾಗಿ ಬೆದರಿಕೆಯೊಡ್ಡಿದ್ದಾರೆ. ಡೈರಿ ವಿವಾದವನ್ನು ಮುಂದಿನ ಚುನಾವಣೆಯವರೆಗೆ ಜೀವಂತವಾಗಿಡಲು ಪಕ್ಷ ಯತ್ನಿಸುತ್ತಿದೆ. 
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕೂಡ ಉತ್ತಮ ಫಲಿತಾಂಶವನ್ನು ಬಿಜೆಪಿ ನಿರೀಕ್ಷಿಸುತ್ತಿದೆ. ಕಾಂಗ್ರೆಸ್ ನ ಪ್ರಮುಖ ನಾಯಕರಾದ ಶ್ರೀನಿವಾಸ್ ಪ್ರಸಾದ್, ಎಸ್.ಎಂ.ಕೃಷ್ಣ, ಕುಮಾರ ಬಂಗಾರಪ್ಪ ಈಗಾಗಲೇ ಬಿಜೆಪಿ ಸೇರಿದ್ದಾರೆ. 2018ರ ವಿಧಾನಸಭೆ ಚುನಾವಣೆಗೆ ಮುನ್ನ 20 ಮಂದಿ ಕಾಂಗ್ರೆಸ್, ಜೆಡಿಎಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಅದು ಹೇಳುತ್ತಿದೆ.
ಮುಂದಿನ ಚುನಾವಣೆಯನ್ನು ಗೆಲ್ಲಲು ನಡೆಸಬೇಕಾದ ಕಾರ್ಯತಂತ್ರಗಳ ಕುರಿತು ಅಮಿತ್ ಶಾ ಸದ್ಯದಲ್ಲಿಯೇ ರಾಜ್ಯ ನಾಯಕರ ಸಭೆ ನಡೆಸಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.