ಮಾರ್ಚ್ 15ರಂದು ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ!
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಮಾರ್ಚ್ 15 (ಬುಧವಾರ)ರಂದು ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಮಾರ್ಚ್ 15 (ಬುಧವಾರ)ರಂದು ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಮೂಲಗಳು ತಿಳಿಸಿರುವಂತೆ ಇದೇ ಮಾರ್ಚ್ 14ರಂದು ದೆಹಲಿಗೆ ತೆರಳಲಿರುವ ಎಸ್ ಎಂ ಕೃಷ್ಣ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದು, ಮಾರನೆಯ ದಿನ ಅಂದರೆ ಬುಧವಾರ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ರಾಜ್ಯದ ಬಿಜೆಪಿ ಹಿರಿಯ ನಾಯಕರೂ ಉಪಸ್ಥಿತರಿರಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಈವರೆಗೂ ಕೃಷ್ಣ ಅವರಿಗೆ ಬಿಜೆಪಿಯಲ್ಲಿ ಯಾವ ಸ್ಥಾನಮಾನ ನೀಡಲಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಲ್ಲ. ಕೃಷ್ಣ ಅವರು ಯಾವುದೇ ಸ್ಥಾನಮಾನ ಕೇಳುವ ಮನಸ್ಥಿತಿಯಲ್ಲಿ ಇಲ್ಲ ಎಂಬ ಮಾತೂ ಕೇಳಿಬರುತ್ತಿದೆ.
ಉತ್ತರಪ್ರದೇಶದಲ್ಲಿನ ಚುನಾವಣೆಯ ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮುಂದಿನ ತಿಂಗಳ 9 ರಂದು ನಡೆಯುವ ರಾಜ್ಯದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನೂ ಗೆಲ್ಲುವ ಉತ್ಸಾಹದಲ್ಲಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟು ಮಾಡುವ ಉದ್ದೇಶವಿದ್ದು, ಅದಕ್ಕೆ ಪೂರಕವಾಗಿ ಕೃಷ್ಣ ಅವರೂ ವಿಳಂಬ ಮಾಡದೆ ಸೇರ್ಪಡೆಯಾಗಲಿ ಎಂಬ ನಿಲುವು ರಾಜ್ಯದ ಬಿಜೆಪಿ ನಾಯಕರದ್ದು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


