ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆ ದಿನಾಂಕ ಮುಂದೂಡಿಕೆ: ದೆಹಲಿಯಿಂದ ಬೆಂಗಳೂರಿಗೆ ವಾಪಸ್
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಗೆ ಇಂದು ದಿನಾಂಕ ನಿಗದಿಯಾಗಿತ್ತು, ದೆಹಲಿಯಲ್ಲಿ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿತ್ತು...

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆಗೆ ಇಂದು ದಿನಾಂಕ ನಿಗದಿಯಾಗಿತ್ತು, ದೆಹಲಿಯಲ್ಲಿ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿತ್ತು. ಆದರೆ ಅವರ ಸಹೋದರಿ ನಿಧನದಿಂದಾಗಿ ಕಾರ್ಯಕ್ರಮ ಮುಂದೂಡಿ ಕೃಷ್ಣ ಬೆಂಗಳೂರಿಗೆ ಆಗಮಿಸಿದ್ದಾರೆ.
ಮಂಗಳವಾರ ರಾತ್ರಿ ಎಸ್. ಎಂ ಕೃಷ್ಣ ಸಹೋದರಿ ಸುನೀತಾ ಅವರ ನಿಧನದಿಂದಾಗಿ ಕಾರ್ಯಕ್ರಮವನ್ನು ಮುಂದೂಡಿ ಕೃಷ್ಣ ಬೆಂಗಳೂರಿಗೆ ವಾಪಸಾಗಿದ್ದಾರೆ. ಮುಂದಿನ ವಾರ ಕೃಷ್ಣ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ದಿನಾಂಕ ಮಾತ್ರ ಇನ್ನೂ ನಿಗದಿಯಾಗಿಲ್ಲ.
ಜನವರಿ ತಿಂಗಳಲ್ಲಿ ಕಾಂಗ್ರೆಸ್ ತೊರೆದಿದ್ದ ಕೃಷ್ಣ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೆ ದಿನಾಂಕ ನಿಗದಿಯಾಗಿತ್ತು.
ಇನ್ನೂ ಎಸ್.ಎಂ ಕೃಷ್ಣ ಬಿಜೆಪಿ ಸೇರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


