ರಮ್ಯಾ ಬಿಜೆಪಿಗೆ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಕಾರ್ಯಕರ್ತನಿಂದ ಬಿಎಸ್ ವೈಗೆ ಬೆದರಿಕೆ ಪತ್ರ
ಮಂಡ್ಯ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.

ಮಂಡ್ಯ: ಮಂಡ್ಯ ಮಾಜಿ ಸಂಸದೆ ಮತ್ತು ನಟಿ ರಮ್ಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಜೆಪಿ ಕಾರ್ಯಕರ್ತನೋರ್ವ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬೆದರಿಕೆ ಪತ್ರ ಬರೆದಿದ್ದಾನೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಅಸಮಾಧಾನಗೊಂಡು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವ ವಿಚಾರದ ಬೆನ್ನಲ್ಲೇ ಮಂಡ್ಯ ಕ್ಷೇತ್ರದ ಮಾಜಿ ಸಂಸದೆ ಮತ್ತು ಚಿತ್ರ ನಟಿ ರಮ್ಯಾ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಬಲವಾಗಿ ಕೇಳಿಬರುತ್ತಿವೆ. ಏತನ್ಮಧ್ಯೆ ರಮ್ಯಾ ಅವರ ಬಿಜೆಪಿ ಸೇರ್ಪಡೆಯನ್ನು ಬಲವಾಗಿ ವಿರೋಧಿಸಿರುವ ಬಿಜೆಪಿ ಕಾರ್ಯಕರ್ತರು, ಒಂದು ವೇಳೆ ರಮ್ಯಾ ಬಿಜೆಪಿ ಸೇರ್ಪಡೆಯಾಗಿದ್ದೇ ಆದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಮಂಡ್ಯ ಬಿಜೆಪಿ ಕಾರ್ಯಕರ್ತಸಿಟಿ ಮಂಜುನಾಥ್ ಎಂಬುವವರು ಈ ಪತ್ರ ಬರೆದಿದ್ದು, ಮಾಜಿ ಸಂಸದೆ ರಮ್ಯಾ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ತಾನು ಪಕ್ಷದ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗುತ್ತೇನೆ. ಈ ಹಿಂದೆ ಪಾಕಿಸ್ತಾನದ ಪರ ಮಾತನಾಡಿ ದೇಶದ್ರೋಹಿ ಹೇಳಿಕೆ ನೀಡಿದ್ದ ರಮ್ಯಾ ಈಗ ಬಿಜೆಪಿಗೆ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಪತ್ರದಲ್ಲಿ ಬರೆದಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


