ಅಲ್ಪಸಂಖ್ಯಾತರಿಗೆ ವಿಶೇಷ ಅನುದಾನ: ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದ ಜಗದೀಶ್ ಶೆಟ್ಟರ್
ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ಜನರಿಗೆ ವಿಶೇಷ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವನ್ನು ಇಬ್ಬಾಗ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ...

Published On :
ಹುಬ್ಬಳ್ಳಿ: ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ಜನರಿಗೆ ವಿಶೇಷ ಅನುದಾನ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವನ್ನು ಇಬ್ಬಾಗ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಶನಿವಾರ ಹೇಳಿದ್ದಾರೆ.
ರಾಜ್ಯ ಬಜೆಟ್ ನಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಜನರಿಗೆ ವಿಶೇಷ ಯೋಜನೆ ಹಾಗೂ ಅನುದಾನಗಳನ್ನು ಘೋಷಣೆ ಮಾಡಿರುವ ಕುರಿತಂತೆ ಪ್ರತಿಕ್ರಿಯೆ ಮಾತನಾಡಿರುವ ಅವರು, ಸೌದಿ ಅರೇಬಿಯಾದಿಂದ ರಾಜ್ಯಕ್ಕೆ ಬರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನಿರುದ್ಯೋಗಸ್ಥರಿಗೆ ಮಾಸಿಕ ಭತ್ಯೆ ನೀಡುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧರ್ಮದ ಆಧಾರದ ಮೇಲೆ ಮತಗಳನ್ನು ಒಡೆಯಲು ಹಾಗೂ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.
ಅಧಿವೇಶನ ಸಂದರ್ಭದಲ್ಲಿ ಈ ವಿಚಾರಗಳ ಬಗ್ಗೆ ಮಾತನಾಡಲು ರಾಜ್ಯ ಸರ್ಕಾರ ನಮಗೆ ಅವಕಾಶವನ್ನು ನೀಡುತ್ತಿಲ್ಲ. ಸ್ಪೀಕರ್ ಮೇಲೆಯೇ ಆಡಳಿತಾರೂಢ ಸರ್ಕಾರ ಒತ್ತಡ ಹೇರುತ್ತಿದ್ದು, ವಿಪಕ್ಷಗಳ ನಾಯಕರಿಗೆ ಮಾತನಾಡಲು ಬಿಡುತ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಸರ್ಕಾರ ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಜಗದೀಶ್ ಶೆಟ್ಟರ್ಅಲ್ಪಸಂಖ್ಯಾತರುState budgetರಾಜ್ಯ ಬಜೆಟ್Minoritiesವಿಶೇಷ ಅನುದಾನspecial allowanceJagdish Shettar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


