ರಾಜಕೀಯ

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ಮುಂಚೂಣಿಯಲ್ಲಿ ತೇಜಸ್ವಿ ಸೂರ್ಯ, ಮಾಳವಿಕಾ ಅವಿನಾಶ್ ಹೆಸರು?

2018 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಮೇ.06 ರಿಂದ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ.

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳು: ಮುಂಚೂಣಿಯಲ್ಲಿ ತೇಜಸ್ವಿ ಸೂರ್ಯ, ಮಾಳವಿಕಾ ಅವಿನಾಶ್ ಹೆಸರು?
ತೇಜಸ್ವಿ ಸೂರ್ಯ- ಮಾಳವಿಕಾ ಅವಿನಾಶ್ (ಸಂಗ್ರಹ ಚಿತ್ರ)
Published On :
ಬೆಂಗಳೂರು: 2018 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತಯಾರಿ ನಡೆಸುತ್ತಿದ್ದು, ಮೇ.06 ರಿಂದ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಈ ಬೆನ್ನಲ್ಲೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆಯೂ ಲೆಕ್ಕಾಚಾರಗಳು ನಡೆಯುತ್ತಿದ್ದು, ಮೈಸೂರಿನ ಕೃಷ್ಣರಾಜ ಕ್ಷೇತ್ರ ಕುತೂಹಲ ಮೂಡಿಸಿದೆ. 
ಮೈಸೂರಿನ ಕೃಷ್ಣಾರಾಜ ವಿಧಾನಸಭಾ ಕ್ಷೇತ್ರ ಬಿಜೆಪಿ ಪ್ರಾಬಲ್ಯ ಇರುವ ಕ್ಷೇತ್ರವಾಗಿದ್ದು, ಕೃಷ್ಣರಾಜ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುವ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಚರ್ಚೆ ಪ್ರಾರಂಭವಾಗಿದ್ದು, ಕೆಲವು ದಿನಗಳ ಹಿಂದೆ ಚಿತ್ರನಟಿ ಮಾಳವಿಕಾ ಅವಿನಾಶ್ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಬಹುದೆಂಬ ವರದಿಗಳು ಪ್ರಕಟವಾಗಿತ್ತು. ಈಗ ಈ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿಯಲ್ಲಿ ಮತ್ತೊಂದು ಹೆಸರು ಕೇಳಿಬರುತ್ತಿದ್ದು, ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಈ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. 
ಬಿಜೆಪಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಮತಗಳು ಇದ್ದು ಉಮೇದುವಾರಿಕೆಗೆ ಮೈಸೂರಿನ ಯುವಕರ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತೇಜಸ್ವಿ ಸೂರ್ಯ ಅವರ ಹೆಸರು ಪ್ರಬಲವಾಗಿ ಕೇಳಿ ಬರುತ್ತಿದೆ. 2014 ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿಯೂ ಮೈಸೂರಿನ ಕಾರ್ಯಕರ್ತರೊಂದಿಗೆ ತೇಜಸ್ವಿ ಸೂರ್ಯ ಉತ್ತಮ ಒಡನಾಟವಿಟ್ಟುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮೈಸೂರಿನಲ್ಲಿ ನಡೆದ ಬೃಹತ್ ಸಾವರ್ಕರ್ ಜಯಂತಿ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು, ಮೈಸೂರಿನ ಸಂಘ ಪರಿವಾರದ ಹಿನ್ನಲೆಯ ಯುವ ಕಾರ್ಯಕರ್ತರು ತೇಜಸ್ವಿಯವರೇ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಆಶಯ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ. ಈ ಎಲ್ಲಾ ಕಾರಣಗಳಿಂದ ತೇಜಸ್ವಿ ಸೂರ್ಯ ಕ್ಷೇತ್ರದ ಅಭ್ಯರ್ಥಿಯಾಗುವ ಸಾಧ್ಯತೆಗಳಿವೆ. 
ಎಸ್.ಎ.ರಾಮದಾಸ್
ಮಾಜಿ ಶಾಸಕ ಮತ್ತು ಮಾಜಿ ವೈದ್ಯಕೀಯ ಶಿಕ್ಷಣ ಸಚಿವ ರಾಮದಾಸರು ಈ ಕ್ಷೇತ್ರದಲ್ಲಿ ಚಿರಪರಿಚಿತರು. ಈ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯೂ ಅವರು ಕೃಷ್ಣರಾಜ ಕ್ಷೇತ್ರದಿಂದ ಕಣಕ್ಕಿಳಿಯಬೇಕಂದು ಪಕ್ಷದ ಟಿಕೆಟ್‌ಗಾಗಿ ಕಸರತನ್ನು ನಡೆಸುತ್ತಿದ್ದಾರೆ. 5 ಬಾರಿ ಚುನಾವಣೆಯನ್ನು ಎದುರಿಸಿರುವ ಅನುಭವ ಇದೆ. 
ಮಾಳವಿಕಾ ಅವಿನಾಶ್
ಬಿಜೆಪಿಯ ವಕ್ತಾರರಾಗಿರುವ ಚಿತ್ರನಟಿ ಮಾಳವಿಕಾ ಅವಿನಾಶ್‌ರವರು ಈ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಆಸಕ್ತಿ ಹೊಂದಿದ್ದಾರೆಂದು ಈಗಾಗಲೆ ವರದಿ ಪ್ರಕಟವಾಗಿದ್ದು ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.