ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ: ಜಮೀರ್ ಅಹ್ಮದ್
ಜೆಡಿಎಸ್ ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಸೇರುವುದಾಗಿ ಖಚಿತ ಪಡಿಸಿದ್ದು, ಚಾಮರಾಜಪೇಟೆ ಕ್ಷೇತ್ರದಿಂದ ಮುಂದಿನ ..

Published On :
ಬೆಂಗಳೂರು: ಜೆಡಿಎಸ್ ನಿಂದ ಅಮಾನತುಗೊಂಡಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಕಾಂಗ್ರೆಸ್ ಸೇರುವುದಾಗಿ ಖಚಿತ ಪಡಿಸಿದ್ದು, ಚಾಮರಾಜಪೇಟೆ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.
ನಗರದ ಕೋಟೆ ಹೈ ಸ್ಕೂಲ್ ಆವರಣದಲ್ಲಿ ಮಾತನಾಡಿದ ಅವರು, ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್ .ಡಿ ದೇವೆಗೌಡ ನನ್ನನ್ನು ಪಕ್ಷದಿಂದ ದೂರ ಇಟ್ಟಿದ್ದಾರೆ. ಹೀಗಾಗಿ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದ್ದೇನೆ , ಚಾಮರಾಜಪೇಟೆಯಿಂದ ನನ್ನ ಸ್ಪರ್ಧೆ ಖಚಿತ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದರು. ಮುಂದಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕುಮಾರಸ್ವಾಮಿ ಹಗಲುಗನಸು ಕಾಣುತ್ತಿದ್ದಾರೆ ಎಂದು ಜಮೀರ್ ಲೇವಡಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Zameer ahmed khanಜಮೀರ್ ಅಹ್ಮದ್ ಖಾನ್ಚಾಮರಾಜಪೇಟೆವಿಧಾನಸಭೆ ಚುನಾವಣೆassembly electionChamarajpet
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


