ಮೊದಲ ಸಭೆಯಲ್ಲಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ ಕೈ ಉಸ್ತುವಾರಿ ವೇಣುಗೋಪಾಲ್
ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕೆಸಿ ವೇಣುಗೋಪಾಲ್ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಅಭಿಪ್ರಾಯ ಸಂಗ್ರಹಣೆಯಲ್ಲಿ ನಿರತರಾಗಿದ್ದಾರೆ.

Published On :
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಕೆಸಿ ವೇಣುಗೋಪಾಲ್ ಪಕ್ಷದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದು, ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು ಹಾಗೂ ವಿವಿಧ ಸಮಿತಿಗಳ ಮುಖ್ಯಸ್ಥರ ಅಭಿಪ್ರಾಯ ಸಂಗ್ರಹಣೆಯಲ್ಲಿ ನಿರತರಾಗಿದ್ದಾರೆ.
ಅಭಿಪ್ರಾಯ ಸಂಗ್ರಹಣೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಉಸ್ತುವಾರಿ ವೇಣುಗೋಪಾಲ್, ಪಕ್ಷದಲ್ಲಿ ಭಿನ್ನಾಭಿಪ್ರಾಯ ಇದೆ. ಭಿನ್ನಾಭಿಪ್ರಾಯ ಇರುವುದು ಸಹಜ. ಅದನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ಬಾರದಂತೆ ಮಾಡುವುದು ಹಾಗೂ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಪ್ರತಿಯೊಬ್ಬ ಪದಾಧಿಕಾರಿಗೂ 10 ನಿಮಿಷಗಳ ಕಾಲಾವಕಾಶ ನೀಡಿ ಮುಂದಿನ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ಸರ್ಕಾರಿ ಯೋಜನೆಗಳು ಜನರಿಗೆ ತಲುಪುತ್ತಿವೆಯೇ ಹಾಗೂ ಸಿದ್ದರಾಮಯ್ಯ ಅವರ ಆಡಳಿತ ಹೇಗಿದೆ ಎಂಬ ಬಗ್ಗೆ ಪ್ರತಿಯೊಬ್ಬರಿಂದಲೂ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.
ಅಭಿಪ್ರಾಯ ಸಂಗ್ರಹಣೆ ವೇಳೆ ಹಲವು ಪದಾಧಿಕಾರಿಗಳು ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಓಟ್ ಬ್ಯಾಂಕ್ ನ್ನು ಭದ್ರಪಡಿಸಿಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ನೇಮಕದ ಕುರಿತು ವೇಣುಗೋಪಾಲ್ ಅವರು ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಶೀಘ್ರವೇ ನೂತನ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಬೇಕೆಂಬ ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೇ.10 ರಂದು ಕಾಂಗ್ರೆಸ್ ಹೈಕಮಾಂಡ್ ತಂಡ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಮಾಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕಾಂಗ್ರೆಸ್ಕರ್ನಾಟಕಉಸ್ತುವಾರಿKarnataka CongressK C Venugopalopinion-collectionಕೆಸಿ ವೇಣುಗೋಪಾಲ್ಅಭಿಪ್ರಾಯ ಸಂಗ್ರಹಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


