ಸಾಮೂಹಿಕ ನಾಯಕತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ: ಖರ್ಗೆ
ಮುಂದಿನ ಚುನಾವಣೆ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿದಿದ್ದು, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ..

Published On :
ಬೆಂಗಳೂರು: ಮುಂದಿನ ಚುನಾವಣೆ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿದಿದ್ದು, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ಲೋಕಸಭಾ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯಲಿದೆ. ನಾನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿರುವ ಬೆನ್ನಲ್ಲೇ ಖರ್ಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ‘ಚುನಾವಣೆ ಬಳಿಕ ಪಕ್ಷ ಅಧಿಕಾರಕ್ಕೆ ಬಂದರೆ, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ತಿಳಿಸಿದರು.
ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒಬ್ಬರೇ ಮಾತನಾಡುತ್ತಾರೆ. ಅದನ್ನು ಉಳಿದವರು ಕೇಳುತ್ತಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ವ್ಯವಸ್ಥೆ ಇದೆ. ಹೈ ಕಮಾಂಡ್ ಹೇಳಿದ್ದನ್ನುಎಲ್ಲರೂ ಒಪ್ಪಬೇಕು’ ಎಂದು ಅವರು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ನಾನು ಅರ್ಜಿ ಹಾಕಿಲ್ಲ. ಅದರ ತಂಟೆಗೂ ಹೋಗಿಲ್ಲ’ ಎಂದು ಖರ್ಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressMallikarjun khargeಮಲ್ಲಿಕಾರ್ಜುನ ಖರ್ಗೆassembly electioncollective leadershipವಿಧಾನಭೆ ಚುನಾವಣೆಸಾಮೂಹಿಕ ನಾಯಕತ್ವ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


