ರಾಜಕೀಯ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಸನಗೌಡ ಬಾದರ್ಲಿ ಆಯ್ಕೆ

ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದ ಶಾಸಕ ಸಿಂಧನೂರು ಹಂಪನಗೌಡ ಬಾದರ್ಲಿ ಸೋದರಳಿಯ ..

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಬಸನಗೌಡ ಬಾದರ್ಲಿ ಆಯ್ಕೆ
ಬಸನಗೌಡ ಬಾದರ್ಲಿ
Published On :
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದ ಶಾಸಕ ಸಿಂಧನೂರು ಹಂಪನಗೌಡ ಬಾದರ್ಲಿ ಸೋದರಳಿಯ ಬಸನಗೌಡ ಬಾದರ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕೆ.ಕೆಂಪರಾಜು, ಕೆ.ಶಿವಕುಮಾರ್‌, ಆರ್. ರಾಜೇಂದ್ರ ಹಾಗೂ ಸುಮಯ್ಯಾ ತಬ್ರೇಝ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದಲ್ಲದೆ, ಪ್ರಧಾನ ಕಾರ್ಯದರ್ಶಿಗಳಾಗಿ 11 ಮಂದಿ ಹಾಗೂ ಕಾರ್ಯದರ್ಶಿಗಳಾಗಿ 35 ಮಂದಿ ಆಯ್ಕೆಯಾಗಿದ್ದಾರೆ.
ಹೊಸದಾಗಿ ಆಯ್ಕೆಯಾದ  ಪದಾಧಿಕಾರಿಗಳು ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರಿಂದ ಸೋಮವಾರ ಅಥವಾ ಮಂಗಳವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್‌  ಸಂಬಂಧಿ ಕೆ. ಕೆಂಪರಾಜು, ಶಾಸಕ ಹಂಪನಗೌಡ ಬಾದರ್ಲಿ ಸಂಬಂಧಿ ಬಸನಗೌಡ ಬಾದರ್ಲಿ, ಮಧುಗಿರಿ ಶಾಸಕ ಕೆ.ಎನ್‌. ರಾಜಣ್ಣ ಪುತ್ರ ಆರ್‌. ರಾಜೇಂದ್ರ ಮಧ್ಯೆ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.