ಜಂತಕಲ್ ಮೈನಿಂಗ್ ಕೇಸ್: ಮೇ 30 ವರೆಗೂ ಎಚ್ ಡಿಕೆ ಜಾಮೀನು ಅವಧಿ ವಿಸ್ತರಣೆ
ಜಂತಕಲ್ ಎಂಟರ್‌ಪ್ರೈಸಸ್’ಗೆ ಅಕ್ರಮವಾಗಿ ಅದಿರು ಸಾಗಿಸಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ..

Published On :
ಬೆಂಗಳೂರು: ಜಂತಕಲ್ ಎಂಟರ್‌ಪ್ರೈಸಸ್’ಗೆ ಅಕ್ರಮವಾಗಿ ಅದಿರು ಸಾಗಿಸಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ನಿರೀಕ್ಷಣಾ ಜಾಮೀನು ಅವಧಿಯನ್ನು ನ್ಯಾಯಾಲಯ ಇದೇ 30ರವರೆಗೆ ವಿಸ್ತರಿಸಿದೆ.
ಇದೇ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಗಂಗಾರಾಂ ಬಡೇರಿಯಾ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದ ನಂತರ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ 53ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೇ 17ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, 23ರವರೆಗೆ ಜಾಮೀನು ನೀಡಿ ವಿಚಾರಣೆ ಮುಂದೂಡಿತ್ತು. ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಧೀಶೆ ವನಮಾಲ ಆನಂದರಾವ್, ಇದೇ 30ಕ್ಕೆ ವಿಚಾರಣೆ ಮುಂದೂಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


