ನಮ್ಮ ಕುಟುಂಬದ ವಿರುದ್ಧ ಐಟಿ ಇಲಾಖೆಗೆ ದೂರಿನ ಹಿಂದೆ ಬಿಎಸ್ ವೈ ಕೈವಾಡ: ಎಚ್ ಡಿಕೆ
ದೇವೇಗೌಡರ ಕುಟುಂಬ 20 ಸಾವಿರ ಕೋಟಿ ರು. ಅಕ್ರಮ ಆಸ್ತಿ ಗಳಿಸಿರುವುದಾಗಿ ವೆಂಕಟೇಶಗೌಡ ಎಂಬುವರು ಆದಾಯ ತೆರಿಗೆ ಇಲಾಖೆಗೆ ನೀಡಿರುವ ...

Published On :
ಬೆಂಗಳೂರು: ದೇವೇಗೌಡರ ಕುಟುಂಬ 20 ಸಾವಿರ ಕೋಟಿ ರು. ಅಕ್ರಮ ಆಸ್ತಿ ಗಳಿಸಿರುವುದಾಗಿ ವೆಂಕಟೇಶಗೌಡ ಎಂಬುವರು ಆದಾಯ ತೆರಿಗೆ ಇಲಾಖೆಗೆ ನೀಡಿರುವ ದೂರಿನ ಹಿಂದೆ ಬಿ.ಎಸ್.ಯಡಿಯೂರಪ್ಪ ಕೈವಾಡ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ದೂರನ್ನು ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಿದ್ಧಪಡಿಸಲಾಗಿದೆ. ಐ.ಟಿ ಇಲಾಖೆಗೆ ಮಧ್ಯಾಹ್ನ ದೂರು ಸಲ್ಲಿಸಿ ರಾತ್ರಿ ಅದರ ಪ್ರತಿಯನ್ನು ವಾಟ್ಸ್ ಅಪ್ ಮೂಲಕ ಎಲ್ಲ ಮಾಧ್ಯಮಗಳಿಗೂ ಬಿಜೆಪಿ ಕಚೇರಿಯಿಂದಲೇ ತಲುಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಯಡಿಯೂರಪ್ಪ ಹೇಡಿತನದ ರಾಜಕಾರಣ ಮಾಡಬಾರದು. ಧೈರ್ಯವಾಗಿ ಮುಂದಿನಿಂದ ರಾಜಕಾರಣ ಮಾಡಬೇಕು. ಕುತಂತ್ರದ ಮೂಲಕ ನನ್ನನ್ನು ಬಲಿಪಶು ಮಾಡಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಕಿಡಿ ಕಾರಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳನ್ನು ಜನತೆ ತಿರಸ್ಕರಿಸುತ್ತಾರೆ ಎಂಬ ಭಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ವರ್ಚಸ್ಸಿಗೆ ಧಕ್ಕೆ ತರಲು ಪ್ರಯತ್ನಿಸುತ್ತಿವೆ ಎಂದು ಆಪಾದಿಸಿದ್ದಾರೆ.
ದೇವೇಗೌಡರ ಕುಟುಂಬದ ವಿರುದ್ಧ ದೂರು ನೀಡಿರುವ ವೆಂಕಟೇಶ್ ಗೌಡ ತಮ್ಮ ಪಕ್ಷದವರಲ್ಲ ಎಂದು ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಇನ್ನೂ ಯಡಿಯೂರಪ್ಪ ವಿರುದ್ಧ ಕುಮಾರ ಸ್ವಾಮಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಂಸದೆ ತೇಜಸ್ವಿನಿ ಗೌಡ, ಕುಮಾರ ಸ್ವಾಮಿ ಅವರಿಹಗೆ ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಎಚ್ ಡಿಕೆ ಹುರುಳಿಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
complaintH.D Kumaraswamyಎಚ್.ಡಿ ಕುಮಾರಸ್ವಾಮಿB S Yeddyurappaಆದಾಯ ತೆರಿಗೆ ಇಲಾಖೆIncome-Tax Departmentದೂರು. ಬಿ.ಎಸ್ ಯಡಿಯೂರಪ್ಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


