ಸಚಿವರು, ಶಾಸಕರ ವಿರುದ್ಧ ಕೈ ಕಾರ್ಯಕರ್ತರ ಅಸಮಾಧಾನ: ವೇಣುಗೋಪಾಲ್ ಗೆ ದೂರು
ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆ ಮಾಡಬೇಕು. ಮತ್ತೊಮ್ಮೆ ಅಧಿಕಾರಕ್ಕೆ ಬರಲೇ ಬೇಕೆಂದು ಪಣತೊಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ...

Published On :
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಬಲವರ್ಧನೆ ಮಾಡಬೇಕು. ಮತ್ತೊಮ್ಮೆ ಅಧಿಕಾರಕ್ಕೆ ಬರಲೇ ಬೇಕೆಂದು ಪಣತೊಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸರಣಿ ಸಭೆ ನಡೆಸುತ್ತಿದ್ದಾರೆ.
ಜಿಲ್ಲಾ ಮಟ್ಟದ ನಾಯಕರುಗಳ ಸಭೆಯಲ್ಲಿ ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ತಾವು ಜಿಲ್ಲೆಗೆ ಭೇಟಿ ನೀಡುವ ಬಗ್ಗೆ ಮಾಹಿತಿ ನೀಡುವುದಿಲ್ಲ, ಸ್ಥಳೀಯ ಮುಖಂಡರ ಜೊತೆ ಸಂಹವನ ನಡೆಸುವುದಿಲ್ಲ, ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳ ಬಗ್ಗೆ ಸ್ಥಳೀಯ ನಾಯಕರ ಜೊತೆ ಚರ್ಚಿಸುವುದಿಲ್ಲ ಎಂದು ಹತ್ತು ಹಲವು ದೂರುಗಳನ್ನು ನೀಡಿದ್ದಾರೆ.
ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮುಖಂಡರು ಕೆಪಿಸಿಸಿ ಕಚೇರಿಯಲ್ಲಿ ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ವೇಣುಗೋಪಾಲ್ ಅವರಿಗೆ ಮುಜುಗರ ಉಂಟು ಮಾಡಿರುವ ಘಟನೆ ಕೂಡ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಹಾಗೂ ಹಾಸನ ಜಿಲ್ಲೆ ಮಾಜಿ ಅಧ್ಯಕ್ಷ ಶಿನರಾಮ್ ಜೆಡಿಎಸ್ ನಿಂದ ಕರೆತಂದವರಿಗೆ ಪ್ರಮುಖ ಹುದ್ದೆಗಳನ್ನು ನೀಡುತ್ತಿದ್ದಾರೆ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಜೊತೆಗೆ ಹಾಸನ ಜಿಲ್ಲೆಯಲ್ಲಿ ಹೆಚ್ಚಾಗಿ ಒಕ್ಕಲಿಗ ಸಮುದಾಯದವರಿಗೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಇತರ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಇದಲ್ಲದೇ ಮಂಡ್ಯ ಮುಖಂಡರ ಸಭೆಯಲ್ಲಿ ಮಾಜಿ ಸಚಿವ ಅಂಬರೀಶ್, ಮಾಜಿ ಸಂಸದೆ ರಮ್ಯಾ ಗೈರಾಗಿದ್ದು ಕಂಡು ಬಂತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


