ಕರ್ನಾಟಕದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ: ಅಮಿತ್ ಶಾ
ಮುಂದಿನ ವರ್ಷ ನಡೆಯುವ ಕರ್ನಾಕಟ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೇ...

Published On :
ನವದೆಹಲಿ: ಮುಂದಿನ ವರ್ಷ ನಡೆಯುವ ಕರ್ನಾಕಟ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ನಡೆದ ಸಂವಾದದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಈ ವಿಷಯ ಸ್ಪಷ್ಟಪಡಿಸಿದ್ದು, ಈ ಮೂಲಕ ಸಿಎಂ ಅಭ್ಯರ್ಥಿ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ಇದೇ ವೇಳೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ನೇತೃತ್ವದಲ್ಲೇ ಈ ವರ್ಷಾಂತ್ಯಕ್ಕೆ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಗುವುದು ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಗುಜರಾತ್ ನೊಂದಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಹಿಮಾಚಲ ಪ್ರದೇಶದಲ್ಲಿ ಪಕ್ಷ ಇನ್ನೂ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.
ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ನಿಂದಾಗಿ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆಎಸ್ ಈಶ್ವರಪ್ಪ ಹಾಗೂ ಬಿಎಸ್ ಯಡಿಯೂರಪ್ಪ ನಡುವೆ ಶೀತಲ ಸಮರ ನಡೆಯುತ್ತಿದ್ದು, ಬಿಜೆಪಿ ಹೈಕಮಾಂಡ್ ನ ಮಧ್ಯಪ್ರವೇಶದಿಂದಾಗಿ ಇಬ್ಬರ ನಡುವಿನ ಮುನಿಸು ತಣ್ಣಗಾಗಿತ್ತು. ಅಲ್ಲದೇ ಬ್ರಿಗೇಡ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಬಾರದು ಎಂದು ಈಶ್ವರಪ್ಪಗೆ ತಾಕೀತು ಮಾಡಿತ್ತು. ಇದೀಗ ಯಡಿಯೂರಪ್ಪನವರೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮತ್ತೊಮ್ಮೆ ಘೋಷಣೆ ಮಾಡಿರುವುದರಿಂದ ಈಶ್ವರಪ್ಪ ಮತ್ತು ವಿರೋಧಿ ಪಾಳಯಕ್ಕೆ ಭಾರೀ ಮುಖಭಂಗವಾದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕAmit ShahBS Yeddyurappaಬಿ.ಎಸ್.ಯಡಿಯೂರಪ್ಪಅಮಿತ್ ಶಾBJP\'s CM faceಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


