ರಾಜಕೀಯ

ಬಲಿಜ ಸಮುದಾಯದ ಸಮಾವೇಶದಲ್ಲಿ ಘಟಾನುಘಟಿ ನಾಯಕರುಗಳ ಸಮಾಗಮ

ಬಲಿಜ ಸಮಾಜಕ್ಕೆ ಹಿಂದುಳಿದ ಪ್ರವರ್ಗ 2ಎ ಅಡಿ ಉದ್ಯೋಗ ಹಾಗೂ ರಾಜಕೀಯ ಮೀಸಲಾತಿ ಕಲ್ಪಿಸುವ ಬೇಡಿಕೆಯನ್ನು ಕೂಲಂಕಷವಾಗಿ ಪರಿಶೀಲಿಸುವುದಾಗಿ ...

ಬಲಿಜ ಸಮುದಾಯದ ಸಮಾವೇಶದಲ್ಲಿ ಘಟಾನುಘಟಿ ನಾಯಕರುಗಳ ಸಮಾಗಮ
ಸಿದ್ದರಾಮಯ್ಯ, ದೇವೇಗೌಡ ಯಡಿಯೂರಪ್ಪ ಮತ್ತು ಅನಂತ್ ಕುಮಾರ್
Published On :
ಬೆಂಗಳೂರು: ಬಲಿಜ ಸಮಾಜಕ್ಕೆ ಹಿಂದುಳಿದ ಪ್ರವರ್ಗ 2ಎ ಅಡಿ ಉದ್ಯೋಗ ಹಾಗೂ ರಾಜಕೀಯ ಮೀಸಲಾತಿ ಕಲ್ಪಿಸುವ  ಬೇಡಿಕೆಯನ್ನು ಕೂಲಂಕಷವಾಗಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ಬಲಿಜ ಮಹಾಸಭಾ ಆಶ್ರಯದಲ್ಲಿ  ಅರಮನೆ ಮೈದಾನದಲ್ಲಿ  ಏರ್ಪಡಿಸಿದ್ದ ಬಲಿಜ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಕೆಲವೇ ತಿಂಗಳುಗಳಲ್ಲಿ ಕೈಸೇರಲಿದೆ. ಆ ಬಳಿಕ, ಬೇಡಿಕೆ ಬಗ್ಗೆ  ನಿರ್ಧಾರ ಕೈಗೊಳ್ಳುತ್ತೇನೆ ಎಂದರು.
ಬಲಿಜ ಸಮಾಜವನ್ನು 2ಎ ಪ್ರವರ್ಗಕ್ಕೆ ಸೇರಿಸಲು ಸಂವಿಧಾನ ತಿದ್ದುಪಡಿ ಅಗತ್ಯವಿಲ್ಲ. ಈ ಬೇಡಿಕೆಯನ್ನು ಈಡೇರಿಸುವಂತೆ ನಾನೂ ವಿನಂತಿ ಮಾಡುತ್ತೇನೆ.  ಕೇಂದ್ರದಲ್ಲಿ ಬಿಜೆಪಿ, ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಇದೆ. ಅವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ ನಾನು ಮತ್ತೆ ಮುಖ್ಯಮಂತ್ರಿಯಾದರೆ ಬಲಿಜ ಸಮಾಜಕ್ಕೆ 24 ಗಂಟೆಯಲ್ಲಿ  ಔದ್ಯೋಗಿಕ ಹಾಗೂ ರಾಜಕೀಯ ಮೀಸಲಾತಿ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.