ವೀರ ಸಾವರ್ಕರ್ ಬಗ್ಗೆ ವಿವಾದಾತ್ಮಕ ಟ್ವೀಟ್, ರಮ್ಯಾ ವಿರುದ್ಧ ಆಕ್ರೋಶ
ಸದಾ ವಿವಾದಗಳಿಂದಲೇ ಸುದ್ದಿಯಾಗುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಈಗ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಮತ್ತೆ...

Published On :
ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಾಗುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಈಗ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
ರಮ್ಯಾ ಅವರು ಈ ಬಾರಿ ಕ್ರಾಂತಿಕಾರಿ ವೀರ ಸಾವರ್ಕರ್ ಕುರಿತು ಹಗುರವಾಗಿ ಟ್ವೀಟ್ ಮಾಡುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಇತ್ತೀಚೆಗೆ ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನ ಉಲ್ಲೇಖಿಸಿ, ಬ್ರಿಟೀಷ್ ವಸಾಹತುಶಾಹಿಯನ್ನು ಬೆಂಬಲಿಸಿದ ಸಾವರ್ಕರ್ ಅವರು ವೀರ್ ಹೇಗಾದ್ರು? ಎಂದು ಪ್ರಶ್ನಿಸಿದ್ದಾರೆ.
ರಮ್ಯಾ ಅವರ ಈ ವಿವಾದಾತ್ಮಕ ಹೇಳಿಕೆಗೆ ಟ್ವೀಟರ್ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಾವರ್ಕರ್ಜೀ ಅವರ ಬಗ್ಗೆ ಮಾತನಾಡಲು ಯೋಗ್ಯತೆ ಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


