ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ: ಎಚ್ ಡಿ ದೇವೇಗೌಡ; ಪ್ರಜ್ವಲ್ ರೇವಣ್ಣ ಕೂಡ ಕಣಕ್ಕೆ!
ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ....

Published On :
ಹಾಸನ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ತಮ್ಮ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸಲಿ ಎಂಬ ಪಕ್ಷದ ಕೆಲವು ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ ರಾಮನಗರದಿಂದಲೇ ಸ್ಪರ್ಧಿಸುವಂತೆ ನಾನು ಕುಮಾರಸ್ವಾಮಿಗೆ ಸೂಚಿಸಿದ್ದೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಈ ಮಧ್ಯೆ, ತಮ್ಮ ಪುತ್ರ ಪ್ರಜ್ವಲ್ ರೇವಣ್ಣ 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಅಥವಾ ಹಾಸನ ಜಿಲ್ಲೆಯ ಬೇಲೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ದೇವೇಗೌಡರ ಸೊಸೆ ಭವಾನಿ ರೇವಣ್ಣ ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಸ್ಪರ್ಧಿಸಲು ದೇವೇಗೌಡರು ಈಗಾಗಲೇ ಗ್ರೀನ್ ಸಿಗ್ನಲ್ ನೀಡಿದ್ದಾರೆ. 2018ರ ಚುನಾವಣೆಯನ್ನು ಜೆಡಿಎಸ್ ಒಂದು ಸವಾಲಾಗಿ ಸ್ವೀಕರಿಸಿದೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ಜನ ಬೇಸತ್ತಿದ್ದು, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಭವಾನಿ ರೇವಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Deve GowdaJDSಕರ್ನಾಟಕಜೆಡಿಎಸ್ಎಚ್ ಡಿ ದೇವೇಗೌಡKarnataka politics224 assembly constituencies224 ವಿಧಾನಸಭಾ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


