ರಾಜಕೀಯ

ಕರಾಳ ದಿನ ಆಚರಿಸುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ: ಜಾವಡೇಕರ್

ನೋಟು ನಿಷೇಧಕ್ಕೆ ಒಂದು ವರ್ಷ ಹಿನ್ನೆಲೆಯಲ್ಲಿ ಈ ದಿನವನ್ನು ಕರಾಳ ದಿನವನ್ನಾಗಿ ಕಾಂಗ್ರೆಸ್ ಆಚರಿಸುವ ಮೂಲಕ ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ ಎಂದು...

ಕರಾಳ ದಿನ ಆಚರಿಸುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ: ಜಾವಡೇಕರ್
ಪ್ರಕಾಶ್ ಜಾವಡೇಕರ್
Published On :
ನವದೆಹಲಿ: ನೋಟು ನಿಷೇಧಕ್ಕೆ ಒಂದು ವರ್ಷ ಹಿನ್ನೆಲೆಯಲ್ಲಿ ಈ ದಿನವನ್ನು ಕರಾಳ ದಿನವನ್ನಾಗಿ ಕಾಂಗ್ರೆಸ್ ಆಚರಿಸುವ ಮೂಲಕ ಭ್ರಷ್ಟಾಚಾರವನ್ನು ಬೆಂಬಲಿಸುತ್ತಿದೆ ಎಂದು ಬಿಜೆಪಿ ಮುಖಂಡ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. 
ನೋಟು ನಿಷೇಧ ಎಂಬುದು ಭ್ರಷ್ಟಾಚಾರದ ವಿರುದ್ಧ ಒಬ್ಬ ಸಾಮಾನ್ಯ ಪ್ರಜೆಯ ಯುದ್ಧ. ಜನ ನೋಟ್ ನಿಷೇಧವನ್ನು ಒಪ್ಪಿದ್ದಾರೆ. ಮೋದಿಯವರು ಪ್ರಾಮಾಣಿಕರ ಪರವಾಗಿ, ಬಡವರ ಪರವಾಗಿ ಹೋರಾಟ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕರಾಳ ದಿನವನ್ನು ಆಚರಿಸುವ ಮೂಲಕ ಭ್ರಷ್ಟಾಚಾರಿಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು. 
ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು ನೋಟು ಬ್ಯಾನ್ ನಂತರ ಡಿಜಿಟಲ್ ಆರ್ಥಿಕತೆ ಬೆಳವಣಿಗೆ ಆಗಿದೆ. ಕ್ರೆಡಿಟ್, ಡೆಬಿಟ್ ಕಾರ್ಡ್ ಗಳ ಸಂಖ್ಯೆ ಹೆಚ್ಚಿದೆ. ಮೂರುವರೆ ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಾಕಷ್ಟು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. ಅದರಲ್ಲೂ ನೋಟು ನಿಷೇಧ ಐತಿಹಾಸಿಕ ನಿರ್ಧಾರವಾಗಿದೆ ಎಂದರು. 
ಯಾರ ಹತ್ತಿರ ಕಪ್ಪುಹಣ ಇದೆಯೋ ಅವರು ಇತ್ತು ಕರಾಳ ದಿನವನ್ನು ಆಚರಿಸುತ್ತಿದ್ದಾರೆ. ಪ್ರಧಾನಿ ಒಂದು ಜನಪರ ಯೋಜನೆ ಮಾಡಿದ್ದಾರೆ. ನಮ್ಮ ದೇಶ ಕೂಡ ಬೇರೆ ದೇಶದ ಜತೆ ಸ್ಪರ್ಧೆಗೆ ನಿಲ್ಲುವಂತಾಗಿದೆ. ಆದರೆ ಇದನ್ನು ಅರಿಯದೆ ಕಾಂಗ್ರೆಸ್ ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಆರ್ ಅಶೋಕ್ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.