ರಾಜಕೀಯ

ನಾನು ಸಿಎಂ ಆಗಲು ನನ್ನ ತಂದೆ ಬಯಸಿರುವುದು ಮೋಜು ಮಾಡಲು ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ: ಎಚ್ ಡಿಕೆ

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಮೈಸೂರಿನ ಚಾಮುಂಡೇಶ್ವರಿ ವಿಧಾನ ಸಭೆ ಕ್ಷೇತ್ರದಲ್ಲಿ ನಿನ್ನೆ ಚುನಾವಣಾ ಪ್ರಚಾರಕ್ಕೆ ...

ನಾನು ಸಿಎಂ ಆಗಲು ನನ್ನ ತಂದೆ ಬಯಸಿರುವುದು ಮೋಜು ಮಾಡಲು ಅಲ್ಲ, ರಾಜ್ಯದ ಅಭಿವೃದ್ಧಿಗಾಗಿ: ಎಚ್ ಡಿಕೆ
ಮೈಸೂರಿನಲ್ಲಿ ಕುಟುಂಬಸ್ಥರೊಂದಿಗೆ ಪೂಜೆ ಸಲ್ಲಿಸಿದ ಮಾಜಿ ಸಿಎಂ ಕುಮಾರ ಸ್ನಾಮಿ
Published On :
ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಮೈಸೂರಿನ ಚಾಮುಂಡೇಶ್ವರಿ  ವಿಧಾನ ಸಭೆ ಕ್ಷೇತ್ರದಲ್ಲಿ ನಿನ್ನೆ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಅವರ ನೀತಿಗಳ ವಿರುದ್ದ ವಾಗ್ದಾಳಿ ನಡೆಸಿದರು.
ಕೇವಲ ಒಕ್ಕಲಿಗರ ಬೆಂಬಲದಿಂದ ಜೆಡಿಎಸ್ ಅಧಿಕಾರದ ಗದ್ದುಗೇಯೇರಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿರುವ ಕುಮಾರಸ್ವಾಮಿ ವೀರಶೈವ ಸಮುದಾಯ ಹಾಗೂ ದಲಿತರ ಓಲೈಕೆಗೆ ಮುಂದಾಗಿದ್ದಾರೆ. ಬಿಜೆಪಿ ರಾಜ್ಯಧ್ಯಕ್ಷ ಯಡಿಯೂರಪ್ಪ ಅವರಿಗೆ  ಬೆಂಬಲ ನೀಡಬೇಡಿ ಎಂದು ಮನವಿ ಮಾಡಿದರು. ಜೊತೆಗೆ 113 ಸೀಟು ಪಡೆಯಲು ಜನ ಜೆಡಿಎಸ್ ಬೆಂಬಲಿಸಬೇಕು ಎಂದು ತಿಳಿಸಿದರು.
2007 ರಲ್ಲಿ ನಾನು ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟುಕೊಟ್ಟಿದ್ದರೇ ಅನಂತ್ ಕುಮಾರ್ ಹಾಗೂ ಇನ್ನಿತರ ಬಿಜೆಪಿ ನಾಯಕರೇ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುತ್ತಿದ್ದರು ಎಂದು ಹೇಳಿದ ಅವರು, ತಾವು ಸಿಎಂ ಆಗಿದ್ದ ವೇಳೆ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಬೆಳ್ಳಿಯ ತೊಟ್ಟಿಲು ನೀಡಿದ್ದನ್ನು ಸ್ಮರಿಸಿದರು.
ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ಮೈಸೂರಿನ ದಲಿತರ ಮನೆಯಲ್ಲಿ ಭೋಜನ ಸೇವಿಸಿದ್ದಾಗಿ ತಿಳಿಸಿದರು, ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಜನತೆ ಅಸಮಾಧಾನಗೊಂಡಿದ್ದಾರೆ, ಹೀಗಾಗಿ ಪ್ರಾದೇಶಿಕ ಪಕ್ಷದ ಕಡೆಗೆ ಜನರು ತಮ್ಮ ಪ್ರೀತಿ ಹಾಗೂ ಒಲವು ತೋರಬೇಕು ಎಂದು ಮನವಿ ಮಾಡಿದರು.
ನಾನು ಮುಖ್ಯಮಂತ್ರಿಯಾಗಬೇಕೆಂದು ನನ್ನ ತಂದೆ ಬಯಸುತ್ತಿರುವುದು ಮೋಜು ಮಾಡಲು ಅಲ್ಲ, ನಾನು ರಾಜ್ಯವನ್ನು ಉತ್ತಮ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇನೆ ಎಂಬ ಆತ್ಮ ವಿಶ್ವಾಸ ಅವರಿಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದ್ದು, ಸಾವಿರಾರು ಮಂದಿರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಕ್ಷೀರ ಭಾಗ್ಯ ಯೋಜನೆಯ ಕ್ರೆಡಿಟ್ ತಮ್ಮ ಸಹೋದರ ಎಚ್ ಡಿ ರೇವಣ್ಣ ಅವರಿಗೆ ಸಲ್ಲಬೇಕು, ಆದರೆ ಸಿಎಂ  ಸಿದ್ದರಾಮಯ್ಯ ರೇವಣ್ಣ ಅವರಿಗೆ ಸಣ್ಣ ಕೃತಜ್ಞತೆ ಕೂಡ ಸಲ್ಲಿಸಲಿಲ್ಲ ಎಂದು ದೂರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.