ಪ್ರಜ್ವಲ್ ಚುನಾವಣಾ ಸ್ಪರ್ಧೆ ವಿಚಾರದಲ್ಲಿ ದೇವೇಗೌಡ, ಕುಮಾರಸ್ವಾಮಿ ನಿರ್ಧಾರವೇ ಅಂತಿಮ: ಹೆಚ್.ಡಿ.ರೇವಣ್ಣ
ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸುವ ಕುರಿತು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ನಿರ್ಧಾರವೇ ಅಂತಿಮ ಎಂದು ಶಾಸಕ ಹೆಚ್.ಡಿ. ರೇವಣ್ಣ...

Published On :
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸುವ ಕುರಿತು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ನಿರ್ಧಾರವೇ ಅಂತಿಮ ಎಂದು ಶಾಸಕ ಹೆಚ್.ಡಿ. ರೇವಣ್ಣ ಅವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪುತ್ರ ಪ್ರಜ್ವಲ್'ಗೆ ರಾಜ್ಯ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ. ಪ್ರಜ್ವಲ್ ಚುನಾವಣಾ ಸ್ಪರ್ಧೆ ಕುರಿತಂತೆ ಸಹೋದರ ಹೆಚ್. ಡಿ. ಕುಮಾರಸ್ವಾಮಿ ಹಾಗೂ ತಂದೆ ದೇವೇಗೌಡ ಅವರು ಒಪ್ಪಿಗೆ ನೀಡದಿದ್ದರೆ, ಚುನಾವಣೆಯಿಂದ ಪ್ರಜ್ವಲ್ ದೂರ ಉಳಿಯುತ್ತಾನೆಂದು ಹೇಳಿದ್ದಾರೆ.
ಪ್ರಜ್ವಲ್ ಸ್ಪರ್ಧೆ ವಿಚಾರದಲ್ಲಿ ನಮ್ಮ ಕುಟುಂಬದವರೇ ಹೊಡೆದಾಡುತ್ತಿದ್ದಾರೆನ್ನುವ ಭ್ರಮೆ ಕೆಲವರಲ್ಲಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸುಮ್ಮನೆ ಗೊಂದಲವನ್ನು ಮೂಡಿಸುತ್ತಿದ್ದಾರೆ. ಅವರ ಕುತಂತ್ರಗಳು ಎಂದಿಗೂಫಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kumaraswamyಕುಮಾರಸ್ವಾಮಿದೇವೇಗೌಡವಿಧಾನಸಭಾ ಚುನಾವಣೆassembly electionDeve GowdaRevannaರೇವಣ್ಣPrajwalಪ್ರಜ್ವಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


