ರಾಜಕೀಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದೇ ದಿನದಲ್ಲಿ ಕೆಪಿಎಂಇ ಮಸೂದೆ ತೆಗೆದುಹಾಕುತ್ತೇವೆ: ಬಿಎಸ್ ಯಡಿಯೂರಪ್ಪ

ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ(ಕೆಪಿಎಂಇ) ಸಂಬಂಧ ವಾದ-ವಿವಾದ...

ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದೇ ದಿನದಲ್ಲಿ ಕೆಪಿಎಂಇ ಮಸೂದೆ  ತೆಗೆದುಹಾಕುತ್ತೇವೆ: ಬಿಎಸ್ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Published On :
ಬೆಂಗಳೂರು: ಖಾಸಗಿ ಆಸ್ಪತ್ರೆ ನಿಯಂತ್ರಣ ತಿದ್ದುಪಡಿ ವಿಧೇಯಕ(ಕೆಪಿಎಂಇ) ಸಂಬಂಧ ವಾದ-ವಿವಾದ, ಪ್ರತಿಭಟನೆ ನಡೆಯುತ್ತಿರುವ ಸಂದರ್ಭದಲ್ಲಿ ರಾಜಕೀಯ ಮೇಲುಗೈ ಸಾಧಿಸಲು ಪಕ್ಷಗಳು ತೀವ್ರವಾಗಿ ಪ್ರಯತ್ನಿಸುತ್ತಿದ್ದು ಪರಿಸ್ಥಿತಿಯ ಅನುಕೂಲ ಪಡೆದುಕೊಳ್ಳಲು ಮುಂದಾಗುತ್ತಿವೆ. 
ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವೈದ್ಯರ ಮುಷ್ಕರಕ್ಕೆ ಸರ್ಕಾರದ ನಡೆಯೇ ಕಾರಣ ಎಂದು ಟೀಕಿಸಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಸೂದೆಯನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ತೆಗೆದುಹಾಕುತ್ತೇವೆ ಎಂದು ಹೇಳಿದರು. 
ವೈದ್ಯರು ಮತ್ತು ಸಂಬಂಧಪಟ್ಟ ಪ್ರತಿನಿಧಿಗಳೊಂದಿಗೆ ಆರೋಗ್ಯಕರ ಚರ್ಚೆ ನಡೆಸದೆ ಮಸೂದೆಯನ್ನು ತರಾತುರಿಯಿಂದ ಸರ್ಕಾರ ಜಾರಿಗೆ ತಂದಿದೆ. ಇದರ ಪರಿಣಾಮ ರೋಗಿಗಳ ಮೇಲಾಗಿದ್ದು ಕೆಲವು ರೋಗಿಗಳು ಮೃತಪಟ್ಟಿದ್ದಾರೆ ಎಂದು ಆಪಾದಿಸಿದರು.
ಮುಂದಿನ ಚುನಾವಣೆ ತನಕ ತಾಳ್ಮೆಯಿಂದ ಕಾಯಿರಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಅಧಿಕಾರ ಪಡೆದು 24 ಗಂಟೆಯೊಳಗೆ ಮಸೂದೆಯನ್ನು ತೆಗೆದುಹಾಕುತ್ತೇವೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.