ಬಿಜೆಪಿ ನಾಯಕರು ಸಂಸ್ಕಾರವನ್ನೇ ಮರೆತಿದ್ದಾರೆ: ಶಾಸಕ ಕೃಷ್ಣ ಬೈರೇಗೌಡ ತಿರುಗೇಟು
ಬಿಜೆಪಿ ನಾಯಕರು ಸಂಸ್ಕಾರವನ್ನೇ ಮರೆತು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಶನಿವಾರ ಹೇಳಿದ್ದಾರೆ.

Published On :
ಬೆಂಗಳೂರು: ಬಿಜೆಪಿ ನಾಯಕರು ಸಂಸ್ಕಾರವನ್ನೇ ಮರೆತು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಶನಿವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿರುವ ಹೇಳಿಕೆಗಳು ಅವರ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ಅಧಿಕಾರಕ್ಕಾಗಿ ಹಪಹಪಿಸುತ್ತಿರುವ ಅವರು ಸಂಸ್ಕೃತಿಯನ್ನೇ ಮರೆತು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಮಾತನಾಡುವಾಗ ಏನು ಮಾತನಾಡುತ್ತಿದ್ದೇನೆ ಎಂಬುದರ ಬಗ್ಗೆ ಅರಿವಿರಬೇಕು. ಆದರೆ ಅನಂತ್ ಕುಮಾರ್ ಹೆಗ್ಡೆ ಅವರಿಗೆ ಅದರ ಅರಿವೇ ಇಲ್ಲದಂತೆ ಮಾತನಾಡುತ್ತಿದ್ದಾರೆ. ಅಸಂಸ್ಕೃತ ನಡವಳಿಕೆ ವೈಭವೀಕರಿಸಲೆಂದೇ ಕೇಂದ್ರ ಸರ್ಕಾರ ಇಂತಹವರಿಗೆ ಮಂತ್ರಿ ಸ್ಥಾನ ನೀಡಿದೆ. ಬಿಜೆಪಿ ನಾಯಕರ ಹೇಳಿಕೆ ಆ ಪಕ್ಷದ ಕೀಳುಮನೋಭಾವದ ಮತ್ತು ಸಂಸ್ಕೃತಿಯ ಕೊರತೆಯನ್ನು ತೋರಿಸುತ್ತಿದೆ. ಬಿಜೆಪಿ ಹಿಂದೂ ಧರ್ಮವನ್ನು ಮತ ಬ್ಯಾಂಕ್ ಆಗಿ ಮಾಡಿಕೊಂಡಿದ್ದು, ಕೇವಲ ಹೆಸರಿಗೆ ಮಾತ್ರ ಹಿಂದೂ ಎಂದು ಹೇಳಿಕೊಳ್ಳುತ್ತಿದೆ. ಆದರೆ ಹಿಂದೂಗಳ ಸಂಸ್ಕೃತಿಯನ್ನು ಅದು ಪಾಲನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿ ಕರ್ನಾಟಕ ದೇಶದ್ರೋಹಿಗಳ ನಾಡಾಗುತ್ತಿದೆ. ಬೆಂಗಳೂರಿನಲ್ಲಿ ಸುಮಾರು 4 ಲಕ್ಷ ಜನ ಅಕ್ರಮ ಬಾಂಗ್ಲಾ ನಿವಾಸಿಗಳಿದ್ದಾರೆ. ಕೇವಲ ಬೆಂಗಳೂರು ಮಾತ್ರವಲ್ಲದೇ ಬೆಳಗಾವಿ, ಬಿಜಾಪುರ, ಹುಬ್ಬಳ್ಳಿ, ಧಾರವಾಡ ಮತ್ತು ಕಿತ್ತೂರಿನಲ್ಲಿ ಕೂಡ ನೀವು ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಕಾಣಬಹುದು. ಕೆಲ ಸಮುದಾಯದವರ ಓಲೈಕೆಗಾಗಿ ಸಿಎಂ ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದು, ವೋಟಿನ ಆಸೆಗೆ ಮತ್ತು ಅಧಿಕಾರಕ್ಕಾಗಿ ಯಾರ ಬೂಟನ್ನಾದರೂ ನೆಕ್ಕುತ್ತಾರೆ. ಟಿಪ್ಪು ಜಯಂತಿ ಆಚರಿಸುವ ಸಿದ್ದರಾಮಯ್ಯ ಕರ್ನಾಟಕದ ಹೆಮ್ಮೆ ರಾಣಿ ಚೆನ್ನಮ್ಮರನ್ನು ಮರೆತ್ತಿದ್ದಾರೆ. ರಾಣಿ ಚೆನ್ನಮ್ಮರಷ್ಟೇ ಅಲ್ಲ...ಕರ್ನಾಟಕ ಏಕೀಕರಣಕ್ಕೆ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಆಲೂರು ವೆಂಕಟರಾಯರು, ಕನ್ನಡಕ್ಕಾಗಿ ಶ್ರಮಿಸಿದ ರನ್ನ, ಜನ್ನ, ಪಂಪ, ಕುವೆಂಪು ಮತ್ತು ಬೇಂದ್ರೆ ಅವರನ್ನೂ ಕೂಡ ಮರೆತಿದ್ದಾರೆ ಎಂದು ಕಿಡಿಕಾರಿದ್ದರು.
ಇದೀಗ ಅನಂತ್ ಕುಮಾರ್ ಹೆಗ್ಡೆ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSiddaramaiahಕೃಷ್ಣ ಬೈರೇಗೌಡKrishna ByregowdaAnantkumar Hegdeಅನಂತ್ ಕುಮಾರ್ ಹೆಗ್ಡೆKarnataka politicsಕರ್ನಾಟಕ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


