ಬೆಂಗಳೂರು: ದಲಿತ ಮುಖಂಡರೊಂದಿಗೆ ಹೆಚ್ ಡಿಕೆ ನಾಳೆ ಸಭೆ
2018ರ ವಿಧಾನಸಭೆ ಚುನಾವಣೆಗೆ ಮುನ್ನ ದಲಿತ ನಾಯಕರನ್ನು ತಲುಪಲು ಜೆಡಿಎಸ್ ...

Published On :
ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಮುನ್ನ ದಲಿತ ನಾಯಕರನ್ನು ತಲುಪಲು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ದಲಿತ ಸಮುದಾಯದ ನಾಯಕರ ಸಭೆಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಾಳೆ ನಡೆಯಲಿದೆ.
ಪ್ರಾದೇಶಿಕ ಪಕ್ಷವೊಂದು ಇಂತಹ ಸಭೆ ನಡೆಸುತ್ತಿರುವುದು ಇದೇ ಮೊದಲಾಗಿದ್ದು ರಾಜ್ಯದ ಅನೇಕ ಕಡೆಗಳಿಂದ ಸುಮಾರು ಸಾವಿರ ದಲಿತ ಮುಖಂಡರು ಭಾಗವಹಿಸಲಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಜನರಿಗೆ ಸಂಬಂಧಪಟ್ಟ ಅನೇಕ ವಿಷಯಗಳು ಮತ್ತು ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಒಂದು ವೇದಿಕೆಯಾಗಲಿದೆ.
ಪಕ್ಷದ ಚುನಾವಣಾ ಪ್ರಣಾಳಿಕೆಯ ರಚನೆಗೆ ಮತ್ತು ಅಧಿಕಾರಕ್ಕೆ ಬಂದರೆ ಅದನ್ನು ಜಾರಿಗೆ ತರಲು ದಲಿತ ಸಮುದಾಯದ ಮುಖಂಡರ ಸಭೆ ಸಹಾಯವಾಗಲಿದೆ ಎನ್ನುತ್ತಾರೆ ಜೆಡಿಎಸ್ ಪರಿಶಿಶ್ಟ ಜಾತಿ ಘಟಕದ ಅಧ್ಯಕ್ಷ ಮತ್ತು ಮಾಜಿ ಶಾಸಕ ಕೆ.ಅನ್ನದಾನಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


