ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರವಿಲ್ಲ!
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂವಿಧಾನ ದಿನಾಚರಣೆ ಹಿನ್ನಲೆ ಜಾಹೀರಾತು ನೀಡಿದ್ದು ಅದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್...

Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂವಿಧಾನ ದಿನಾಚರಣೆ ಹಿನ್ನಲೆ ಜಾಹೀರಾತು ನೀಡಿದ್ದು ಅದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಾಕದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ರಾಜ್ಯ ಸರ್ಕಾರದ ಜಾಹೀರಾತಿನಲ್ಲಿ ಕೇವಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವಿದೆ. ಇದಕ್ಕೆ ವಿಪಕ್ಷಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.
ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರ ಬಳಸದೆ ಇರುವಷ್ಟು ದಾಷ್ಟ್ಯ ನಿಮ್ಮಲ್ಲಿರುವುದು ಅತ್ಯಂತ ಖೇದಕರ. ಇದಕ್ಕೆ ಹೇಳುವುದು ಶ್ರೀ ನರೇಂದ್ರ ಮೋದಿ ಅವರನ್ನು ನೋಡಿ ಕಲಿಯಿರಿ ಎಂದು ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಸಂಸದೆ ಶೋಭಾ ಕರಂದ್ಲಾಜೆ ಸಹ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು ಮುಖ್ಯಮಂತ್ರಿಗಳು ತಾವೇ ದೊಡ್ಡ ಅಹಿಂದ ನಾಯಕ ಅಂದುಕೊಂಡಿದ್ದಾರೆ. ಆದರೆ ಈಗ ಅವರ ನಿಜ ಮುಖ ಬಯಲಾಗಿದೆ. ಕೂಡಲೇ ಮುಖ್ಯಮಂತ್ರಿಗಳು ನಾಡಿನ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


