ರಾಜಕೀಯ

ರೇವಣ್ಣ ಪುತ್ರ ಪ್ರಜ್ವಲ್ ಗೆ ಅಂತೂ ಮಣೆ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅಧಿೃಕೃತವಾಗಿ ಅವಕಾಶ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.

ರೇವಣ್ಣ ಪುತ್ರ ಪ್ರಜ್ವಲ್ ಗೆ ಅಂತೂ ಮಣೆ; ಜೆಡಿಎಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ
ಪ್ರಜ್ವಲ್ ರೇವಣ್ಣ ಮತ್ತು ದೇವೇಗೌಡ (ಫೇಸ್ ಬುಕ್ ಚಿತ್ರ)
Published On :
ಬೆಂಗಳೂರು: ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅಧಿೃಕೃತವಾಗಿ ಅವಕಾಶ ನೀಡಲಾಗಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಇದೇ ಮೊದಲ ಬಾರಿಗೆ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಿಲಾಗಿದ್ದು, ಜೆಡಿಎಸ್ ವರಿಷ್ಟ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ  ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ. 
ಈ ಹಿಂದಿನಿಂದಲೂ ಪ್ರಜ್ವಲ್ ರೇವಣ್ಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರುತ್ತಾ ಬರುತ್ತಿದ್ದರಾದರೂ, ಪಕ್ಷದ ವರಿಷ್ಠ ಎಚ್ ಡಿ ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ  ಕುಮಾರಸ್ವಾಮಿ ಅವರು ಈ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿದ್ದರು. ಇದೀಗ ಅವರಿಗೆ ಮೊದಲ ಬಾರಿಗೆ ಪಕ್ಷದ ಪದಾಧಿಕಾರಿ ಸ್ಥಾನ ನೀಡಲಾಗಿದ್ದು, ಈ ಮೂಲಕ ಅಧಿಕೃತವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು  ಅವಕಾಶ ನೀಡಲಾಗಿದೆ.
ಪ್ರಜ್ವಲ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಬಂಧ ಜೆಡಿಎಸ್ ನಲ್ಲಿ ಉಂಟಾಗಿದ್ದ ಅಸಮಾಧಾನವನ್ನು ಸರಿಪಡಿಸುವ ಸಂಬಂಧ ಗೌಡರು ಈ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಆ ಮೂಲಕ ಮಾಜಿ ಸಚಿವ ಎಚ್ ಡಿ  ರೇವಣ್ಣ ಪುತ್ರ  ಪ್ರಜ್ವಲ್ ಅವರು ಕೊನೆಗೂ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.