ರಾಜಕೀಯ

ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪ ಸಾಬೀತಾದ್ರೆ ಜೈಲಿಗೆ ಹೋಗಲು ಸಿದ್ಧ: ಪರಮೇಶ್ವರ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು....

ಸರ್ಕಾರದ ವಿರುದ್ಧದ ಭ್ರಷ್ಟಾಚಾರ ಆರೋಪ ಸಾಬೀತಾದ್ರೆ ಜೈಲಿಗೆ ಹೋಗಲು ಸಿದ್ಧ: ಪರಮೇಶ್ವರ
ಜಿ ಪರಮೇಶ್ವರ
Published On :
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಕೋರ್ಟ್ ನಲ್ಲಿ ಸಾಬೀತಾದರೆ ತಾವು ಜೈಲಿಗೆ ಹೋಗಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸೋಮವಾರ ಹೇಳಿದ್ದರೆ.
ಇಂದು ನಗರದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪರಮೇಶ್ವರ, ರಾಜ್ಯ ಸರ್ಕಾರದ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ಸಾಬೀತಾದರೆ ನಮ್ಮ ಪಕ್ಷದ ನಾಯಕರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಆದರೆ ಬಿಜೆಪಿ ನಾಯಕರು ಅನಗತ್ಯವಾಗಿ ಭ್ರಷ್ಟಾಚಾರದ ಆರೋಪ ಮಾಡುವುದರಿಂದ ಯಾವುದೇ ಪ್ರಯೋಜನೆ ಇಲ್ಲ ಎಂದಿದ್ದಾರೆ.
ಬಿಜೆಪಿ ನಾಯಕರ ಭ್ರಷ್ಟಾಚಾರ ಆರೋಪಗಳಿಗೆ ರಾಜ್ಯದ ಜನತೆಯೇ ಉತ್ತರ ನೀಡುತ್ತಾರೆ. ರಾಜ್ಯ ಸರ್ಕಾರ ಕಳೆದ 2013ರ ವಿಧನಾಸಭೆ ಚುನಾನಣೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದು, ಈ ಬಗ್ಗೆ ಪಕ್ಷಕ್ಕೆ ತೃಪ್ತಿ ಇದೆ ಮತ್ತು ನಾವು ಯಾವುದೇ ತಪ್ಪು ಮಾಡಿಲ್ಲ ಎಂಬ ವಿಶ್ವಾಸವಿದೆ ಎಂದರು. ಅಲ್ಲದೆ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿಯಲಿದೆ ಎಂದು ಪರಮೇಶ್ವರ ಹೇಳಿದ್ದಾರೆ.
ಇನ್ನು ಈ ವೇಳೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿಬಿ ಜಯಚಂದ್ರ ಅವರು, ಬಿಜೆಪಿ ಪರಿವರ್ತನಾ ಯಾತ್ರೆ ಮೊದಲ ದಿನವೇ ಟುಸ್ಸಾಗಿದೆ. ಈಗ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸರಿಪಡಿಸುವುದರಲ್ಲಿ ಬಿಜೆಪಿ ನಾಯಕರು ಬ್ಯುಸಿಯಾಗಿದ್ದಾರೆ. ಬಿಜೆಪಿ ಯಾತ್ರೆಯಿಂದ ಸಕಾರಾತ್ಮಕ ಬದಲಾವಣೆಯಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.