ವಿದ್ಯುತ್ ಖರೀದಿ ಕುರಿತು ಬಿಎಸ್'ವೈರಿಂದ ಜನರಿಗೆ ತಪ್ಪು ಮಾಹಿತಿ: ಡಿಕೆ ಶಿವಕುಮಾರ್
ವಿದ್ಯುತ್ ಖರೀದಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜನರನ್ನು ಹಾದಿಗೆ ಎಳೆಯುತ್ತಿದ್ದಾರೆಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ...

Published On :
ಹುಬ್ಬಳ್ಳಿ: ವಿದ್ಯುತ್ ಖರೀದಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜನರನ್ನು ಹಾದಿಗೆ ಎಳೆಯುತ್ತಿದ್ದಾರೆಂದು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ಈ ಕುರಿತಂತ ಮಾತನಾಡಿರುವ ಅವರು ಕೇಂದ್ರ ಸರ್ಕಾರ ಪ್ರತಿ ಯುನಿಟ್'ರೂ.2.50 ದರದಂತೆ ವಿದ್ಯುತ್ ಪೂರೈಸಲು ಸಿದ್ದವಿದ್ದರೂ ರಾಜ್ಯ ಸರ್ಕಾರ ವಿದ್ಯುತ್ ಖರೀದಿಗೆ ಹಿಂದೇಟು ಹಾಕುತ್ತುದೆ ಎಂದು ಯಡಿಯೂರಪ್ಪ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಅವರು ರೂ.2.50 ದರಕ್ಕೆ ಪ್ರತಿ ಯುನಿಟ್ ವಿದ್ಯುತ್ ಕೊಡಿಸಲು ಸಿದ್ದವಾದರೆ, ರಾಜ್ಯ ಸರ್ಕಾರ ವಿದ್ಯುತ್ ಖರೀದಿಗೆ ಈ ವರೆಗೂ ಮಾಡಿಕೊಂಡಿಲುವ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸಿ, ಕೇವಲ ಕೇಂದ್ರದಿಂದ ವಿದ್ಯುತ್ ಖರೀದಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ರೂ.2.50 ದರಕ್ಕೆ ಪ್ರತಿ ಯುನಿಟ್ ವಿದ್ಯುತ್ ಕೊಡಿಸಲು ಸಿದ್ದವಾದರೆ, ರಾಜ್ಯ ಸರ್ಕಾರ ವಿದ್ಯುತ್ ಖರೀದಿಗೆ ಈ ವರೆಗೂ ಮಾಡಿಕೊಂಡಿಲುವ ಎಲ್ಲಾ ಒಪ್ಪಂದಗಳನ್ನು ರದ್ದುಗೊಳಿಸಿ, ಕೇವಲ ಕೇಂದ್ರದಿಂದ ವಿದ್ಯುತ್ ಖರೀದಿಸಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಶೀಘ್ರದಲ್ಲಿಯೇ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆಯುತ್ತೇನೆ. ತಮ್ಮ ನೇತೃತ್ವದಲ್ಲಿ ಸಭೆಯೊಂದನ್ನು ನಡೆಸುವಂತೆ ಹಾಗೂ ಸಭೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇನೆ. ಇಷ್ಟೊಂದು ಕಡಿಮೆ ದರದಲ್ಲಿ ವಿದ್ಯುತ್ ದೊರೆಯುವುದಾದರೆ ನಮಗೆ ಬಹಳ ಸಂತೋಷವಾಗುತ್ತದೆ.
ಯಡಿಯೂರಪ್ಪ ಅವರು ರಾಜಕೀಯ ಪ್ರೇರಿತವಾಗಿ ಹೇಳಿಕೆಯನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ. ಒಂದು ವೇಳೆ ಯುನಿಟ್ ಗೆ ರೂ.2.50ಕ್ಕೆ ವಿದ್ಯುತ್ ದೊರೆಯುವುದಾದರೆ ಖರೀದಿ ಮಾಡಲು ನಾವು ಸಿದ್ಧವಿದ್ದೇವೆಂದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಕೇಂದ್ರದಿಂದ ರೂ.5.08ರಂತೆ 900 ಮೆಗಾ ವ್ಯಾಟ್ ವಿದ್ಯುತ್ ನ್ನು ಖರೀದಿ ಮಾಡಿತ್ತು. ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ಇಲಾಖೆ ಸಾಕಷ್ಟು ಶ್ರಮ ಪಡುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


