ರಾಜಕೀಯ

ಗುಜರಾತ್ ಚುನಾವಣಾ ಪ್ರಚಾರದಿಂದ ದೂರ ಉಳಿಯಲು ಡಿಕೆ ಶಿವಕುಮಾರ್ ನಿರ್ಧಾರ

ಇಡೀ ದೇಶದ ಗಮನ ಸೆಳೆದಿರುವ ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಿಂದ ದೂರ ಉಳಿಯಲು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ...

ಗುಜರಾತ್ ಚುನಾವಣಾ ಪ್ರಚಾರದಿಂದ ದೂರ ಉಳಿಯಲು ಡಿಕೆ ಶಿವಕುಮಾರ್ ನಿರ್ಧಾರ
ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್
Published On :
ಬೆಂಗಳೂರು: ಇಡೀ ದೇಶದ ಗಮನ ಸೆಳೆದಿರುವ ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯಿಂದ ದೂರ ಉಳಿಯಲು ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 
ಅಹ್ಮದ್ ಪಟೇಲ್ ಗುಜರಾತ್ ನಿಂದ ರಾಜ್ಯಸಭೆ ಚುನಾವಣೆಗ ಸ್ಪರ್ಧಿಸಿದಾಕ ಗುಜರಾತ್ ಶಾಸಕರಿದೆ ರಾಜ್ಯದಲ್ಲಿ ಆಶ್ರಯ ನೀಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕಣ್ಣು ಕೆಂಪಗಾಗುವಂತೆ ಮಾಡಿತ್ತು. ಇದೇ ವೇಳೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರ ನಿವಾಸ ಹಾಗೂ ಕಚೇರಿಗೆಳ ಮೇಲೆ ದಾಳಿ ನಡೆಸಿತ್ತು. ಇದಾದ ಬಳಿಕ ಗುಜರಾತ್ ಚುನಾವಣೆ ಇಡೀ ದೇಶದ ಗಮನವನ್ನು ಸೆಳೆಯುತ್ತಿದೆ. 
ಗುಜರಾತ್ ರಾಜ್ಯ ಚುನಾವಣೆಯ ಪ್ರಚಾರ ಕಾರ್ಯಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಗುಜರಾತ್ ಚುನಾವಣಾ ಪ್ರಚಾರದಲ್ಲಿ ನಾನು ಭಾಗಿಯಾಗುತ್ತಿಲ್ಲ. ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಹೈಕಮಾಂಡ್ ನಿಂದ ಯಾವುದೇ ಆಹ್ವಾನಗಳೂ ಬಂದಿಲ್ಲ ಎಂದು ತಿಳಿಸಿದ್ದಾರೆ. 
ಗುಜರಾತ್ ಚುನಾವಣಾ ಪ್ರಚಾರದಲ್ಲಿ ನಾನು ಭಾಗಿಯಾಗುತ್ತಿಲ್ಲ: ಸಿದ್ದರಾಮಯ್ಯ
ರಾಜ್ಯದ ಕಾರ್ಯಗಳಲ್ಲಿ ನಾನು ನಿರತವಾಗಿದ್ದು, ಗುಜರಾತ್ ಪ್ರಚಾರಕ್ಕೆ ನಾನು ಹೋಗಿಲ್ಲ. ಪಕ್ಷದ ಹೈಕಮಾಂಡ್ ನಿಂದ ಯಾವುದೇ ಸೂಚನೆಗಳೂ ಬಂದಿಲ್ಲ. ನಮ್ಮ ಪಕ್ಷದಲ್ಲಿ ಸಾಕಷ್ಟು ರಾಷ್ಟ್ರೀಯ ನಾಯಕರಿದ್ದಾರೆ. ಪ್ರಚಾರಕ್ಕೆ ನನ್ನ ಅಗತ್ಯವಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.