ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಒವೈಸಿಯ ಎಐಎಂಎಂ ಸ್ಪರ್ಧೆ!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (ಎಐಎಂಎಂ) ಪಕ್ಷ ಕೂಡ ಕಣಕ್ಕಿಳಿಯಲಿದೆ ಎಂದು ತಿಳಿದುಬಂದಿದೆ.

Published On :
ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇಥೇಹಾದುಲ್ ಮುಸಲ್ಮಿನ್ (ಎಐಎಂಎಂ) ಪಕ್ಷ ಕೂಡ ಕಣಕ್ಕಿಳಿಯಲಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಮಾಹಿತಿ ನೀಡಿದ್ದು, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದರು. ಇದಕ್ಕೂ ಮೊದಲು ಹೈದರಾಬಾದ್ ನ ದುರುಸ್ಸಲಾಂನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ಘಟಕದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ ಒವೈಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಒವೈಸಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಅಂತಹ ವ್ಯತ್ಯಾಸವೇನೂ ಇಲ್ಲ.. ಈ ಎರಡೂ ಪಕ್ಷಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ..ಕಾಂಗ್ರೆಸ್ ಪಕ್ಷ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತಾಡುತ್ತದೆ. ಆದರೆ ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳಲ್ಲೇ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ. ಕರ್ನಾಕದಲ್ಲಿಯೂ ನನ್ನ ಸಾರ್ವಜನಿಕ ಸಭೆಗಳಿಗೆ ಅನುಮತಿ ಇಲ್ಲ ಎಂದು ಒವೈಸಿ ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕರ್ನಾಟಕAsaduddin Owaisiಅಸಾದುದ್ದೀನ್ ಒವೈಸಿKarnataka politicsAIMMKarnataka Assembly Election 2018ಎಐಎಂಎಂಕರ್ನಾಟಕ ವಿಧಾನಸಭಾ ಚುನಾವಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


