ರಾಜಕೀಯ

ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ: ಬಿಎಸ್ ವೈಗೆ ವಿನಯ್ ಪತ್ನಿ ಶೋಭಾ ಪತ್ರ!

ನಿಮಗೂ ಹೆಣ್ಣು ಮಕ್ಕಳು, ಸೊಸೆಯರಿದ್ದಾರೆ... ಅವರಿಗೂ ಹೀಗೆ ಆದರೆ ಸುಮ್ಮನಿರುತ್ತೀರಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ ಎಂದು ಬಿಜೆಪಿ ಮಾಧ್ಯಮ ಸಹಸಂಚಾಲಕ ವಿನಯ್ ಅವರ ಪತ್ನಿ ಶೋಭಾ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.

ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ: ಬಿಎಸ್ ವೈಗೆ ವಿನಯ್ ಪತ್ನಿ ಶೋಭಾ ಪತ್ರ!
ಬಿಎಸ್ ವೈ (ಸಂಗ್ರಹ ಚಿತ್ರ)
Published On :
ಬೆಂಗಳೂರು: ನಿಮಗೂ ಹೆಣ್ಣು ಮಕ್ಕಳು, ಸೊಸೆಯರಿದ್ದಾರೆ... ಅವರಿಗೂ ಹೀಗೆ ಆದರೆ ಸುಮ್ಮನಿರುತ್ತೀರಾ? ಹೆಣ್ಣುಮಕ್ಕಳ ಶಾಪ ಒಳ್ಳೆಯದಲ್ಲ ಎಂದು ಬಿಜೆಪಿ ಮಾಧ್ಯಮ ಸಹಸಂಚಾಲಕ ವಿನಯ್ ಅವರ ಪತ್ನಿ ಶೋಭಾ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.
ವಿನಯ್ ಕುಲಕರ್ಣಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರವೊಂದನ್ನು ಬರೆದಿರುವ ಶೋಭಾ ಅವರು, ಪ್ರಕರಣ ಸಂಬಂಧ ಯಡಿಯೂರಪ್ಪ ಅವರ ನಡೆ ವಿರುದ್ಧ ಅಸಮಾಧಾನ ತೀವ್ರ ವ್ಯಕ್ತಪಡಿಸಿದ್ದಾರೆ. ನನ್ನ ಗಂಡನ ಸ್ನೇಹ ಬೆಳೆಸಿ ಸಂತೋಷ್ ರಾಜಕೀಯವಾಗಿ ಬೆಳೆದರು. ನಮ್ಮ ಮನೆಯಲ್ಲೇ ಅನ್ನ ತಿಂದು ನನ್ನ ಗಂಡನ ಕೊಲೆಗೆ ಪ್ರಯತ್ನಿಸಿದರು ಎಂದು ಆರೋಪಿಸಿದ್ದಾರೆ. 
ಬಿಎಸ್ ಯಡಿಯೂರಪ್ಪ ಅವರಿಗೆ ಸುಮಾರು 3 ಪುಟಗಳ ಪತ್ರವೊಂದನ್ನು ಶೋಭಾ ಅವರು ಬರೆದಿದ್ದು, ಪತ್ರದಲ್ಲಿ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ. ಪತ್ರ ಸಂಕ್ಷಿಪ್ತ ವಿವರ  ಇಲ್ಲಿದೆ.
"ಯಡಿಯೂರಪ್ಪನವರೇ ಕರುಣೆ ಇಲ್ವಾ? ಹೆಣ್ಣು ಮಕ್ಕಳ ಶಾಪ ಒಳ್ಳೆಯದಲ್ಲ. ನಿಮಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ, ಸೊಸೆಯರಿದ್ದಾರೆ. ಅವರಿಗೂ ಹೀಗೆ ಆದರೆ ಸುಮ್ಮನಿರುತ್ತೀರಾ? ನನ್ನ ಜಾಗದಲ್ಲಿ ನಿಮ್ಮ ಮನೆ ಹೆಣ್ಣು ಮಕ್ಕಳಿದ್ದಿದ್ದರೆ  ಏನು ಮಾಡುತ್ತಿದ್ದಿರಿ.. ಉತ್ತರ ಕೊಡಿ?. ನನ್ನ ಗಂಡನ ಸ್ನೇಹ ಬೆಳೆಸಿ ಸಂತೋಷ್ ರಾಜಕೀಯವಾಗಿ ಬೆಳೆದರು. ನಮ್ಮ ಮನೆಯಲ್ಲೇ ಅನ್ನ ತಿಂದು ನನ್ನ ಗಂಡನ ಕೊಲೆಗೆ ಪ್ರಯತ್ನಿಸಿದರು. ಅನ್ನ ಹಾಕಿದ ಮನೆಗೆ ಕನ್ನ ಹಾಕಿದವರ  ಪರವಾಗಿ ನಿಂತಿದ್ದೀರ ನೀವು. ಸಂತೋಷ್ ನನ್ನು ಪೊಲೀಸರು ಹಿಡಿಯಲು ಬಂದಾಗ ತಪ್ಪಿಸಿಕೊಳ್ಳಲು ಸಹಾಯ ಮಾಡಿ ಬೇಲ್ ಕೊಡಿಸಿದ್ದೀರಿ. ಇದೇನಾ ನೀವು ಕಾನೂನಿಗೆ ಕೊಡುವ ಗೌರವ? ಏನೂ ತಪ್ಪು ಮಾಡದ ನನ್ನ ಗಂಡನನ್ನ  ನೀವು, ನಿಮ್ಮ ಪಕ್ಷ ನಡೆಸಿಕೊಳ್ಳುತ್ತಿರುವ ರೀತಿ ಸರಿಯಲ್ಲ. ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಚ್ಚುತ್ತಿದ್ದೀರಾ. ನಿಮ್ಮ ಹೋರಾಟ ಪ್ರಾಮಾಣಿಕ ಹೋರಾಟವಾಗಿರಬೇಕೆ ಹೊರತು ರಾಜಕೀಯ ಹೋರಾಟವಾಗಿರಬಾರದು  ಎಂದು ಶೋಭಾ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ನಿಮ್ಮ ಹತ್ತಿರ ಅಧಿಕಾರವಿದೆ, ಹಣಬಲವಿದೆ. ಆದರೆ ನಾವು ಬಡವರು. ನೀವು ಕೋರ್ಟ್, ಕಚೇರಿಗೆ ದಿನ ಅಲೆದಾಡಿ ಅಭ್ಯಾಸ ಇದೆ. ಆದರೆ ನಮ್ಮ ಪ್ರಮಾಣಿಕತೆಗೆ ನ್ಯಾಯ ಸಿಕ್ಕೆ ಸಿಗುತ್ತದೆ. ಹೋರಾಡುವ ಹಾಗಿದ್ರೆ  ಮುಂದೆಯಿಂದ ಹೋರಾಡಿ, ಪ್ರಾಣ ತೆಗೆಯೋ ಕೆಲಸ ಮಾಡಬೇಡಿ. ಇಂದಿನಿಂದ ಯಾವುದಕ್ಕೂ ಹೆದರಲ್ಲ. ಒಳ್ಳೆಯದು, ಕೆಟ್ಟದನ್ನ ಆ ದೇವರು ನೋಡಿಕೊಳ್ಳುತ್ತಾನೆ. ಇಲ್ಲಿವರೆಗೂ ನಿಮ್ಮ ಬಗ್ಗೆ ರಾಜ್ಯದ ಹೆಣ್ಣುಮಕ್ಕಳಿಗೆ ತಿಳಿದಿರಲಿಲ್ಲ.  ಆದರೆ ಇನ್ನು ಮುಂದೇ ನಿಮ್ಮ ಬಗ್ಗೆ ತಿಳಿಯುತ್ತದೆ. ನನ್ನ ಗಂಡನ ಪ್ರಮಾಣಿಕ ಹೋರಾಟದ ಬೆಂಬಲಕ್ಕೆ ನಿಮ್ಮ ಪಕ್ಷದಿಂದ ಯಾರೂ ಬರಲಿಲ್ಲ ಎಂದು ಶೋಭಾ ಆಕ್ರೋಶದಿಂದ ಪತ್ರದಲ್ಲಿ ಬರೆದಿದ್ದಾರೆ.
ಮಾಧ್ಯಮಗಳಿಗೆ ದೊರೆತ ಪತ್ರದ ಪೂರ್ಣ ಪಾಠ ಇಲ್ಲಿದೆ
Story image
Story image

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.