ರಾಜಕೀಯ

ಕಾಂಗ್ರೆಸ್ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಜೊತೆ ಹಲವು ಕಲಾವಿದರು ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಹಾಗೂ ರಾಜ್ಯ ಮಾಹಿತಿ ಹಕ್ಕು ಆಯೋಗದ ಮಾಜಿ ಆಯುಕ್ತ ಶಂಕರ್ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ...

ಕಾಂಗ್ರೆಸ್ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಜೊತೆ ಹಲವು ಕಲಾವಿದರು ಬಿಜೆಪಿ ಸೇರ್ಪಡೆ
ನೆ.ಲ ನರೇಂದ್ರ ಬಾಬು
Published On :
ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಹಾಗೂ ರಾಜ್ಯ ಮಾಹಿತಿ ಹಕ್ಕು ಆಯೋಗದ ಮಾಜಿ ಆಯುಕ್ತ ಶಂಕರ್ ಪಾಟೀಲ್ ಸೇರಿದಂತೆ ಹಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ  ರಾಜ್ಯ ಬಿಜೆಪಿ ಉಸ್ತುವಾರಿ ಕೆ. ಮುರುಳೀಧರ್ ರಾವ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಕಲಾವಿದರಾದ ಆಶಾಲತಾ, ಜ್ಯೋತಿ ಮುಂತಾದಾವರು ಬಿಜೆಪಿ ಸೇರಿದ್ದಾರೆ.
ನಿವೃತ್ತ ಡಿವೈಎಸ್ ಪಿ ಸೋಮಶೇಖರ್ ಛಬ್ಬಿ, ಸಾಮಾಜಿಕ ಕಾರ್ಯಕರ್ತ,ಎಂ.ಜಿ ರಂಗಧಾಮಯ್ಯ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇದೇ ವೇಳೆ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ಹಲವು ಪಕ್ಷಗಳ ಪ್ರಮುಖ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಆಡಳಿತದ ವಿರುದ್ಧ ರಾಜ್ಯದ ಜನತೆಗೆ ಅಸಮಾಧಾನ ಮೂಡಿದ್ದು, ಬಿಜೆಪಿಗೆ ಮತ ಹಾಕಲಿದ್ದಾರೆ, ಬಿಜೆಪಿ ಮಿಷನ್ 150 ಯಶಸ್ವಿಯಾಗಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.