ಪ್ರಕಾಶ್ ರೈಗೆ ಪ್ರಚಾರದ ಹುಚ್ಚಿದ್ದರೇ ಯಾವುದಾದರೂ ಪಕ್ಷ ಸೇರಲಿ: ಸುರೇಶ್ ಕುಮಾರ್
ನಟ ಪ್ರಕಾಶ್ ರಾಜ್ ಅವರಿಗೆ ಪ್ರಚಾರದ ಹುಚ್ಚು ಇದ್ದರೆ ಯಾವುದಾದರೂ ರಾಜಕೀಯ ಪಕ್ಷ ಸೇರಿಕೊಳ್ಳಲಿ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ...

Published On :
ಬೆಂಗಳೂರು: ನಟ ಪ್ರಕಾಶ್ ರಾಜ್ ಅವರಿಗೆ ಪ್ರಚಾರದ ಹುಚ್ಚು ಇದ್ದರೆ ಯಾವುದಾದರೂ ರಾಜಕೀಯ ಪಕ್ಷ ಸೇರಿಕೊಳ್ಳಲಿ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದು ಶಾಸಕ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಸುರೇಶ್ ಕುಮಾರ್ ಕಾವೇರಿ ನದಿ ನೀರಿನ ಸಮಸ್ಯೆ ವಿಷಯದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ್ದ ಪ್ರಕಾಶ್ ರಾಜ್ ತಾನೊಬ್ಬ ನಟ ಎಂದಿದ್ದರು. ಈಗ ರಾಜ್ಯದಲ್ಲಿ ನಡೆದ ಹತ್ಯೆಗಳಿಗೆ ಪ್ರಧಾನಿ ಪ್ರತಿಕ್ರಿಯಿಸಬೇಕು ಎಂದು ಅವರು ಹೇಳುವ ಅಗತ್ಯವಿರಲಿಲ್ಲ. ಎದುರಿಗೆ ಇದ್ದ ಜನರಿಂದ ಚಪ್ಪಾಳೆ ಗಿಟ್ಟಿಸುವ ಉದ್ದೇಶಕ್ಕೆ ಹೀಗೆ ಅವರು ಹೇಳಿಕೆ ನೀಡಿದ್ದಾರೆ ಎಂದು ಅವರು ಟೀಕಿಸಿದರು.
2018ರ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ 17 ಮಂದಿ ಸದಸ್ಯರ ಪ್ರಣಾಳಿಕೆ ಸಮಿತಿ ರಚಿಸಿದೆ.
ಮಾಜಿ ಸಚಿವರುಗಳಾಗ ಬಸವರಾಜ ಬೊಮ್ಮಾಯಿ, ಬಿಜೆಪಿ ಉಪಾಧ್ಯಕ್ಷ ಶ್ರೀನಿವಾಸ ಪ್ರಸಾದ್, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಲಕ್ಷ್ಮಣ ಸವದಿ, ಡಾ. ಅಶ್ವತ್ಥ ನಾರಾಯಣ, ಮಾಜಿ ಸಂಸದ, ಜಿಎಸ್ ಬಸವರಾಜು, ಡಾ. ವಾಮನಾಚಾರ್ಯ, ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ, ಕೆ.ಬಿ ಶಾಣಪ್ಪ, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್,ಮತ್ತಿತರರು ಸಮಿತಿಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


