ರಾಜಕೀಯ

ನಗರ ಜನತೆಗೆ 'ಗುಂಡಿ ಭಾಗ್ಯ': ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ವಾಗ್ದಾಳಿ

ಭಾರೀ ಮಳೆಯಿಂದಾಗಿ ನಗರದ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ರಸ್ತೆ ಗುಂಡಿಯಿಂದಾಗಿ ಸಂಭವಿಸುತ್ತಿರುವ ಅಪಘಾತ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ...

ನಗರ ಜನತೆಗೆ 'ಗುಂಡಿ ಭಾಗ್ಯ': ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ವಾಗ್ದಾಳಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ
Published On :
ಬೆಂಗಳೂರು: ಭಾರೀ ಮಳೆಯಿಂದಾಗಿ ನಗರದ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ರಸ್ತೆ ಗುಂಡಿಯಿಂದಾಗಿ ಸಂಭವಿಸುತ್ತಿರುವ ಅಪಘಾತ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಕಾರ್ಯವೈಖರಿ ವಿರುದ್ಧ ಬಿಜೆಪಿ ಗುರುವಾರ ತೀವ್ರವಾಗಿ ಕಿಡಿಕಾರಿದೆ. 
ರಸ್ತೆ ಗುಂಡಿಯಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿವಿಧ ನಾಯಕರು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ. 
ಈ ವೇಳೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು, ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಕಾಂಗ್ರೆಸ್ ಪಕ್ಷ ದೊಡ್ಡ ದೊಡ್ಡ ಭರವಸೆಗಳನ್ನು ನೀಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಹೇಗೆ ಆಡಳಿತ ನಡೆಸುತ್ತಿದೆ ಎಂಬುದನ್ನು ನಗರದಲ್ಲಿರುವ ರಸ್ತೆ ಗುಂಡಿಗಳೇ ಹೇಳುತ್ತಿವೆ. ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ನೀಡುವುದಾಗಿ ಹೇಳುತ್ತಿರುವ ಸಿದ್ದರಾಮಯ್ಯ ಅವರು ಸಾಮಾನ್ಯ ಮೂಲಭೂತ ಸೌಕರ್ಯ ಒದಗಿಸುವಲ್ಲಿಯೇ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ. 
ರಸ್ತೆ ಗುಂಡಿಗಳಿಂದಾಗಿ ನಗರದಲ್ಲಿ ಈ ವರೆಗೂ 5 ಮಂದಿ ಬಲಿಯಾಗಿದ್ದಾರೆ. ರಸ್ತೆಗಳ ಕಾಮಗಾರಿಗಾಗಿ ರೂ. 4000 ಕೋಟಿ ಖರ್ಚು ಮಾಡಿರುವುದಾಗಿ ಸರ್ಕಾರ ಹೇಳುತ್ತಿದೆ. ಅಲ್ಲದೆ, ರೂ. 100 ಕೋಟಿ ಸಾಲವನ್ನು ಪಡೆದುಕೊಂಡಿದೆ. ಆದರೂ, ನಗರದ ರಸ್ತೆಗಳ ಸ್ಥಿತಿ ಹೀಗಿದೆ. ಹಾಗಿದ್ದರೆ, ಆ ಹಣ ಎಲ್ಲಿ ಹೋಯಿತು...? ಇದು ಸಿದ್ದರಾಮಯ್ಯ ಸರ್ಕಾರದ ಆಡಳಿತದ ಫಲ ಎಂದು ತಿಳಿಸಿದ್ದಾರೆ.
ಬಳಿಕ ಮಾತನಾಡಿರುವ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಅವರು, ಬೆಂಗಳೂರು ನಗರ ಐಟಿಯಲ್ಲದೆ ರಸ್ತೆಗಳ ಗುಂಡಿಗಳನ್ನು ಹೊಂದಿರುವ ನಗರವಾಗಿ ನಿರ್ಮಾಣಗೊಳ್ಳುತ್ತಿದೆ. ಈ ಹಿಂದೆಂದೂ ಕಂಡಿರದಂತಹ ಪರಿಸ್ಥಿತಿ ಇಂದು ನಗರ ಎದುರಿಸುತ್ತಿದೆ. ಜನರು ಸಂಕಷ್ಟವನ್ನು ಎದುರಿಸುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ ಪಡುತ್ತಿದ್ದಾರೆ. ಇದೇ ಸಿದ್ದರಾಮಯ್ಯ ಸರ್ಕಾರ ಮುಖವಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.