ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಉಚ್ಚಾಟನೆ
ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ದೇವರಹಿಪ್ಪರಗಿ ಕಾಂಗ್ರೆಸ್ ಬಂಡಾಯ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರನ್ನು....

Published On :
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ದೇವರಹಿಪ್ಪರಗಿ ಕಾಂಗ್ರೆಸ್ ಬಂಡಾಯ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಶುಕ್ರವಾರ ಉಚ್ಚಾಟಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ಹಾಗೂ ಕಳೆದ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ವಿರುದ್ಧವೇ ಬಹಿರಂಗವಾಗಿ ಪ್ರಚಾರ ಮಾಡಿದ್ದ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಂದ ಪಕ್ಷಕ್ಕೆ ಹಾನಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಇಂದು ಅವರನ್ನು ಪಕ್ಷದಿಂದಲೇ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಶಾಸಕರಾಗಿರುವ ನಡಹಳ್ಳಿ ಅವರು ಈ ಹಿಂದೆ ಕಳೆದ ಆರು ದಶಕಗಳಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಬಹಿರಂಗ ವಾಗ್ದಾಳಿ ನಡೆಸಿದ್ದರು.
ಈ ಮಧ್ಯೆ ಶಾಸಕ ನಡಹಳ್ಳಿ ಅವರು ಜೆಡಿಎಸ್ ಸೇರುವ ಸಿದ್ಧತೆ ನಡೆಸಿದ್ದು, ಮುಂದಿನ ವಿಧಾಸಭೆ ಚುನಾವಣೆಯಲ್ಲಿ ಜೆಡಿಎಸ್ ನಿಂದಲೇ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


