ನಿಗದಿಯಂತೆ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯುತ್ತದೆ: ಸಿಎಂ ಸಿದ್ದರಾಮಯ್ಯ
ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದೆ..ನಿಗದಿತ ವೇಳಾಪಟ್ಟಿಯಂತೆ ಕಾರ್ಯಕ್ರಮಗಳು ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Published On :
ಮಂಗಳೂರು: ಪ್ರತೀ ವರ್ಷದಂತೆ ಈ ಬಾರಿಯೂ ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಯಲಿದೆ..ನಿಗದಿತ ವೇಳಾಪಟ್ಟಿಯಂತೆ ಕಾರ್ಯಕ್ರಮಗಳು ನಡೆಯಲಿದ್ದು, ಈಗಾಗಲೇ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವುದಕ್ಕಾಗಿ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ "ಈ ಬಾರಿಯೂ ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಕಾರ್ಯಕ್ರಮಗಳು ನಡೆಯಲಿವೆ. ಟಿಪ್ಪು ಜಯಂತಿ ಆಚರಣೆಯ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಕಾರ್ಯಕ್ರಮದ ವೇಳೆ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ನಡೆಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಂತೆಯೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರ ಪತ್ರವನ್ನು ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಅವರು, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಲಾಗುತ್ತದೆ. ಸಮಾರಂಭದಲ್ಲಿ ಪಾಲ್ಗೊಳ್ಳುವುದು, ಪಾಲ್ಗೊಳ್ಳದಿರುವುದು ಅವರವರ ಇಷ್ಟಕ್ಕೆ ಬಿಟ್ಟಿದ್ದು ಎಂದು ಹೇಳಿದರು. ಅಂತೆಯೇ ಟಿಪ್ಪು ವಿರೋಧಿಗಳನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ಅವರು, ಮೈಸೂರು ಯುದ್ಧಗಳು ಏಕೆ ಮತ್ತು ಹೇಗೆ ನಡೆದವು? ಟಿಪ್ಪು ಹೇಗೆ ಮಡಿದ ಎಂಬುದು ಹಲವರಿಗೆ ತಿಳಿದಿಲ್ಲ. ಟಿಪ್ಪು ಸುಲ್ತಾನ್ ಅನ್ನು ವಿರೋಧಿಸುವವರಿಗೆ ಆತನ ಇತಿಹಾಸ ಗೊತ್ತಿದೆಯೇ ಎಂದು ಪ್ರಶ್ನಿಸಿದರು.
"ಬಿಜೆಪಿ ರಾಜಕೀಯ ಕಾರಣದಿಂದ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ. ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದಾರೆ. ಶೋಭಾ ಕರಂದ್ಲಾಜೆ ಕೂಡಾ ಅವರಿಗೆ ಸಾಥ್ ನೀಡಿದ್ದರು. ಅಂದು ಟಿಪ್ಪು ಸುಲ್ತಾನ್ ನ ಪೋಷಾಕು ಧರಿಸಿ ಖಡ್ಗ ಝಳಪಿಸಿ ಯಡಿಯೂರಪ್ಪ ಫೋಸ್ ನೀಡಿದ್ದರು. ಇದೀಗ ಯಡಿಯೂರಪ್ಪ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ವಿಪರ್ಯಾಸ ಎಂದು ಸಿದ್ದರಾಮಯ್ಯ ಹೇಳಿದರು.
ಇದಕ್ಕೂ ಮೊದಲು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅರಣ್ಯ ಸಚಿವ ಬಿ.ರಮಾನಾಥ ರೈ, ಯು.ಟಿ.ಖಾದರ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿಗಳು ಅಲ್ಲಿಂದ ಮಂಗಳೂರಿನಲ್ಲಿರುವ ಸರ್ಕ್ಯೂಟ್ ಹೌಸ್ ಗೆ ತೆರಳಿದರು. ಬಳಿಕ ಅಲ್ಲಿಂದ ಬಂಟ್ವಾಳಕ್ಕೆ ಪಯಣ ಬೆಳೆಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


