ರಾಜಕೀಯ

ಮತ್ತೆ ಜೆಡಿಎಸ್ ಗೆ ಮರಳಿದ ಹಿರಿಯ ನಾಯಕ ಪಿಜಿಆರ್ ಸಿಂಧ್ಯ

ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ಹೊರಗುಳಿದಿದ್ದ ಜನತಾ ಪರಿವಾರದ ಹಿರಿಯ ತಲೆಮಾರಿನ ನಾಯಕ ಹಾಗೂ ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯ ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ.

ಮತ್ತೆ ಜೆಡಿಎಸ್ ಗೆ ಮರಳಿದ ಹಿರಿಯ ನಾಯಕ ಪಿಜಿಆರ್ ಸಿಂಧ್ಯ
ಮತ್ತೆ ಜೆಡಿಎಸ್ ಗೆ ಮರಳಿದ ಹಿರಿಯ ನಾಯಕ ಪಿಜಿಆರ್ ಸಿಂಧ್ಯ
Published On :
ಬೆಂಗಳೂರು: ಕೆಲ ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ಹೊರಗುಳಿದಿದ್ದ ಜನತಾ ಪರಿವಾರದ ಹಿರಿಯ ತಲೆಮಾರಿನ ನಾಯಕ ಹಾಗೂ ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯ ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ. ಸಿಂಧ್ಯ ಇಂದು ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ  ನಡೆದ ಪೂಜಾ ಕಾರ್ಯಕ್ರಮದ ಸಂದರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಸಿಂಧ್ಯ ಜೆಡಿಎಸ್ ಗೆ ಸೇರಿದ್ದಾರೆ. ಇದಕ್ಕೂ ಮುನ್ನ ಪದ್ಮನಾಭನಗರದ ದೇವೇಗೌಡದ ನಿವಾಸದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ದೇವೇಗೌಡರ ಬಳಿ ನಿನ್ನೆ ಮಾತುಕತೆ ನಡೆಸಿದ್ದರು.
ಪಕ್ಷಕ್ಕೆ ಮರಳಿದ ಸಿಂಧ್ಯ, ಇನ್ನು ಮುಂದೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಹೇಳಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬೇಕೇ ಅಥವಾ ಬೇಡವೇ ಎಂಬುದನ್ನು ಪಕ್ಷದ ನಾಯಕತ್ವ ನಿರ್ಧರಿಸಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.