ಯಾತ್ರೆಯೊಂದಿಗೆ ಸಿಎಂ ಸಿದ್ದು ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭ: ಬಿ.ಎಸ್. ಯಡಿಯೂರಪ್ಪ
ನವ ಕರ್ನಾಟಕ ಪರಿವರ್ತನಾ ಯಾತ್ರೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಂಗಳಾರ ಹೇಳಿದ್ದಾರೆ...

Published On :
ಬೆಂಗಳೂರು: ನವ ಕರ್ನಾಟಕ ಪರಿವರ್ತನಾ ಯಾತ್ರೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಂಗಳಾರ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಯುವ ಮನಸ್ಥಿತಿಯಲ್ಲಿ ಜನರಿಲ್ಲ. ಸಿದ್ದರಾಮಯ್ಯ ಸರ್ಕಾರದ ಆಡಳಿತವನ್ನು ಅಂತ್ಯಗೊಳಿಸಲು ಜನರು ಬಯಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಯನ್ನು ಆರಂಭಿಸಲಾಗತ್ತಿದೆ ಎಂದು ಹೇಳಿದ್ದಾರೆ.
ನ.2 ರಿಂದ ಆರಂಭವಾಗಲಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಸರ್ವಸಿದ್ಧತೆಗಳು ನಡೆದಿದ್ದು, ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಇದೊಂದು ಐತಿಹಾಸಿಕ ಯಾತ್ರೆಯಾಗಲಿದೆ. ದಕ್ಷಿಣ ಕರ್ನಾಟಕದ 17 ಜಿಲ್ಲೆಗಳಿಂದ ಪ್ರತಿ ಬೂತ್ ನಿಂದಲೂ 3 ಬೈಕ್ ಗಳಲ್ಲಿ 6 ಮಂದಿಯಂತೆ ಅಂದಾಜು 3 ಲಕ್ಷ ಮಂದಿ ಸೇರುವ ನಿರೀಕ್ಷೆಯಿದೆ. ಯಾತ್ರೆ ಉದ್ಘಾಟಿಸಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪರಿಕಲ್ಪನೆಯಂತೆ ಬೈಕ್ ರ್ಯಾಲಿ ನಡೆಯಲಿದೆ.
75 ದಿನಗಳ ಕಾಲ ಬೃಹತ್ ರ್ಯಾಲಿ ನಡೆಯಲಿದ್ದು, ಮುಂದಿನ ವರ್ಷ ಜನವರಿ 28 ರಂದು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದೊಂದಿಗೆ ರ್ಯಾಲಿ ಅಂತಿಮಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಗೆ ಭಯ ಹೇಳಿಕೆ: ಸಿಎಂ ಹೇಳಿಕೆ ವರ್ಷದ ಜೋಕ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಕಂಡನೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭಯ ಎಂಬ ಹೇಳಿಕೆ ನೀಡಿರುವುದು ಜೋಕ್ ಆಫ್ ದಿ ಇಯರ್ ಎಂದು ಯಡಿಯೂರಪ್ಪ ಅವರು ಲೇವಡಿ ಮಾಡಿದ್ದಾರೆ.
ಪ್ರಧಾನಿ ಮೋದಿಯವರಿಗೆ ತಾವೆಂದರೆ ಭಯವೆಂಬ ಸಿದ್ದರಾಮಯ್ಯ ಹೇಳಿಕೆ ದೊಡ್ಡ ತಮಾಷೆಯಾಗಿದ್ದು, ಅವರ ಹೇಳಿಕೆ ಅವರಲ್ಲಿರುವ ಸೊಕ್ಕನ್ನು ತೋರಿಸುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿSiddaramaiahಸಿದ್ದರಾಮಯ್ಯYeddyurappaಯಡಿಯೂರಪ್ಪNavakarnataka Parivartan Yatraನವ ಕರ್ನಾಟಕ ಪರಿವರ್ತನಾ ಯಾತ್ರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


