ಕೇಂದ್ರ ಸಂಪುಟದಲ್ಲಿ ಲಿಂಗಾಯಿತರಿಗೆ ಸ್ಥಾನ ನೀಡಬೇಕು: ಬೆಳಗಾವಿ ಸಂಸದ ಸುರೇಶ್ ಅಂಗಡಿ
ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನರ್ ರಚನೆ ವೇಳೆ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ...

Published On :
ಬೆಂಗಳೂರು: ನಿನ್ನೆ ನಡೆದ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಪುನರ್ ರಚನೆ ವೇಳೆ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಬೇಸರಗೊಂಡಿರುವ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು, ಕೇಂದ್ರ ಸಂಪುಟದಲ್ಲಿ ಉತ್ತರ ಕರ್ನಾಟಕದ ಲಿಂಗಾಯಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದಿರುವುದಕ್ಕೆ ರಾಜ್ಯ ನಾಯಕರನ್ನು ದೂಷಿಸಿದ್ದಾರೆ.
ಸದ್ಯ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಲಿಂಗಾಯಿತರನ್ನು ಪ್ರತಿನಿಧಿಸುವ ಯಾವ ಸಚಿವರು ಇಲ್ಲ. ಇಬ್ಬರು ಬ್ರಾಹ್ಮಣರು, ಓರ್ವ ಒಕ್ಕಲಿಗರು ಹಾಗೂ ಒಬ್ಬರು ಪರಿಶಿಷ್ಟ ಪಂಗಡದವರು ಇದ್ದಾರೆ. ಆದರೆ ಲಿಂಗಾಯಿತರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಆದರೆ ಬಿಜೆಪಿ ಲಿಂಗಾಯಿತ ಮತಗಳ ಮೇಲೆ ಹೆಚ್ಚು ಅವಲಂಭಿತವಾಗಿದೆ ಎಂದು ಸುರೇಶ್ ಅಂಗಡಿ ಹೇಳಿದ್ದಾರೆ.
ನೂತನ ಬಿಜೆಪಿ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ನನ್ನನ್ನು ಆಹ್ವಾನಿಸಿದರೆ ನಾನು ಖಂಡಿತ ಈ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದು ಸುರೇಶ್ ಅಂಗಡಿ ಅವರು ತಿಳಿಸಿದ್ದಾರೆ.
ಈ ಬಾರಿ ಲಿಂಗಾಯತ ಸಮುದಾಯದ ಸುರೇಶ್ ಅಂಗಡಿ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಕೊನೆ ಗಳಿಯಲ್ಲಿ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ಪ್ರಕಾಶ್ ಜಾವಡೇಕರ್ ಅವರು ರಾಜ್ಯ ಉಸ್ತುವಾರಿ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನಗರಕ್ಕೆ ಭೇಟಿ ನೀಡಿದ್ದು, ಇಂದು ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


