ಸಿಎಂ ಮತ್ತವರ ಸಂಬಂಧಿಕರ ನಿಜ ಬಣ್ಣ ಶೀಘ್ರವೇ ಬಯಲು: ಬಿಎಸ್ ವೈ
ತಾವು ಸಾಚಾ ಎಂದು ಘೋಷಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತವರ ಸಂಬಂಧಿಕರ ಭ್ರಷ್ಟಾಚಾರದ ನಿಜ ಬಣ್ಣವನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ....

Published On :
ಬೆಂಗಳೂರು: ತಾವು ಸಾಚಾ ಎಂದು ಘೋಷಿಸಿಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತವರ ಸಂಬಂಧಿಕರ ಭ್ರಷ್ಟಾಚಾರದ ನಿಜ ಬಣ್ಣವನ್ನು ಮುಂದಿನ ನಾಲ್ಕೈದು ದಿನಗಳಲ್ಲಿ ಬಯಲಿಗೆಳೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಸಿಎಂ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ನಿಮ್ಮ ಬಳಿ ಅದಕ್ಕೆ ಪೂರಕವಾದ ದಾಖಲೆಗಳಿವೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ದಾಖಲೆಗಳನ್ನು ಸಂಗ್ರಹಿಸುತ್ತಿದ್ದೇವೆ, ಪ್ರಮುಖವಾದ ಪತ್ರಗಳನ್ನು ಪಡೆಯುವುದು ಸ್ವಲ್ಪ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.
ಎಲ್ಲಾ ಅಗತ್ಯ ದಾಖಲೆಗಳನ್ನ ಸಂಗ್ರಹಿಸಿ ಮುಂದಿನ 4-5 ದಿನಗಳಲ್ಲಿ ಸಿಎಂ ಹಾಗೂ ಅವರ ಸಂಬಂಧಿಕರ ವಿರುದ್ಧದ ನಮ್ಮ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ನಿಮ್ಮ ಆರೋಪಗಳಿಗೆ ಸೂಕ್ತ ಸಾಕ್ಷಿ ಇದೆಯೇ, ಭ್ರಷ್ಟಾಚಾರ ನಡೆಸಿರುವುದು ನಿಜವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಅಗತ್ಯ ದಾಖಲಾತಿಗಳನ್ನು ಸಂಗ್ರಹಿಸುತ್ತೇವೆ ಎಂದು ಶೇ, 101 ರಷ್ಚು ಭರವಸೆಯಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಭ್ರಷ್ಟಾಚಾರದ ಬಗೆಗಿನ ಆಘಾತಕಾರಿ ಮಾಹಿತಿಯನ್ನು ದಾಖಲಾತಿಗಳೊಂದಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


