ರಾಜಕೀಯ

ರಾಹುಲ್ ಗಾಂಧಿ ಪ್ರಧಾನಿಯಾಗುವ ಹಗಲುಗನಸು ಕಾಣುತ್ತಿದ್ದಾರೆ: ಬಿಎಸ್ ಯಡಿಯೂರಪ್ಪ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಆಗುವ ಕುರಿತು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುವ ಹಗಲುಗನಸು ಕಾಣುತ್ತಿದ್ದಾರೆ: ಬಿಎಸ್ ಯಡಿಯೂರಪ್ಪ
ಸಂಗ್ರಹ ಚಿತ್ರ
Published On :
ಬಾಗಲಕೋಟೆ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಆಗುವ ಕುರಿತು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ನಾನು ಪ್ರಧಾನಿ ಹುದ್ದೆಗೆ ಸಿದ್ಧನಿದ್ದೇನೆ, ಅವಕಾಶ ಬಂದರೆ ಒಪ್ಪಿಕೊಳ್ಳುತ್ತೇನೆ. ಆದರೆ ಕಾಂಗ್ರೆಸ್ ನಲ್ಲಿ ಸಂಘಟನಾ ವ್ಯವಸ್ಥೆ ಇದ್ದು, ಆರಿಸಿ ಬರಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಕ್ಯಾಲಿಫೋರ್ನಿಯಾದ ಬರ್ಕ್ ಲೀ ಯಲ್ಲಿನ  ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದಲ್ಲಿ ಭಾರತಕ್ಕೆ 70 ವರ್ಷವಾದ ನೆನಪಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಈ ಅಭಿಪ್ರಾಯವ್ಯಕ್ತಪಡಿಸಿದ್ದರು. ಚಿಕ್ಕಮಕ್ಕಳ ಮನಸ್ಥಿತಿ ಇರುವ ರಾಹುಲ್ ಗಾಂಧಿ ಪ್ರಧಾನಿ ಆಗುವ ತಿರುಕನ  ಕನಸು ಕಾಣುತ್ತಿದ್ದಾರೆ ಎಂದು ಯಡಿಯೂರಪ್ಪ ವ್ಯಂಗ್ಯವಾಡಿದರು.
ಎಂಬಿ ಪಾಟೀಲ್ ರದ್ದು ವಿನಾಶಕಾಲೇ ವಿಪರೀತ ಬುದ್ಧಿ
ಇನ್ನು ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಸರ್ಕಾರ ಮತ್ತು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ರನ್ನು ತರಾಟೆಗೆ ತೆಗೆದುಕೊಂಡ ಬಿಎಸ್ ಯಡಿಯೂರಪ್ಪ ಅವರು, "ಎಂ.ಬಿ.ಪಾಟೀಲರದ್ದು ವಿನಾಶ ಕಾಲೇ ವಿಪರೀತ ಬುದ್ಧಿ.  ಈ ವಿಚಾರದಲ್ಲಿ ಸಿದ್ದಗಂಗಾ ಶ್ರೀಗಳ ಹೆಸರು ಎಳೆತರಬಾರದಿತ್ತು. ಅವರ ಬಗ್ಗೆ  ಮಾತನಾಡಿದರೆ ಎಲ್ಲರೂ ಖಂಡಿಸುತ್ತಾರೆ. ಹೀಗಾಗಿ ಮೌನವಾಗಿದ್ದರೆ ಅವರಿಗೂ ಗೌರವ'' ಎಂದರು. ಅಂತೆಯೇ ಪ್ರತ್ಯೇಕ ಲಿಂಗಾಯತ ಸ್ವತಂತ್ರ  ಧರ್ಮದ ವಿಚಾರದಲ್ಲಿ ವೀರಶೈವ ಮಹಾಸಭಾ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಈ ವಿಚಾರದಲ್ಲಿ ರಾಜಕೀಯ ಗೊಂದಲ ಸೃಷ್ಟಿಸುವುದು ಬೇಡ'' ಎಂದು ಹೇಳಿದರು.
ಸಿದ್ದು ಸರ್ಕಾರದ ಭ್ರಷ್ಟಾಚಾರದ ಚಾರ್ಜ್‌ ಶೀಟ್‌ ರೆಡಿ
''ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಬಂಧುಗಳು ಮಾಡಿರುವ ಭ್ರಷ್ಟಾಚಾರದ ಕುರಿತಾಗಿನ ಚಾರ್ಜ್‌ ಶೀಟ್‌ ಸಿದ್ದಪಡಿಸಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಹಗರಣವನ್ನು ಬಯಲು ಮಾಡುತ್ತೇನೆ'' ಎಂದು ಯಡಿಯೂರಪ್ಪ  ಬಾಂಬ್‌ ಸಿಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.