ಬೆಂಗಳೂರು ಮೇಯರ್ ಚುನಾವಣೆ: ಜೆಡಿಎಸ್ ನಿರ್ಧಾರದತ್ತ ಕಾಂಗ್ರೆಸ್, ಬಿಜೆಪಿ ಚಿತ್ತ!
ಬಿಬಿಎಂಪಿ ಮೇಯರ್ ಚುನಾವಣೆಗೆ ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ತನ್ನ ಹಳೇಯ ದೋಸ್ತಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮುಂದುವರಿಸುತ್ತದೆಯೋ ...

Published On :
ಬೆಂಗಳೂರು: ಬಿಬಿಎಂಪಿ ಮೇಯರ್ ಚುನಾವಣೆಗೆ ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ತನ್ನ ಹಳೇಯ ದೋಸ್ತಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮುಂದುವರಿಸುತ್ತದೆಯೋ ಅಥವಾ ಬೆಂಬಲ ವಾಪಸ್ ಪಡೆದುಕೊಳ್ಳುತ್ತದೆಯೋ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಎಲ್ಲರ ಕಣ್ಣು ಈಗ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್,ಡಿ ಕುಮಾರಸ್ವಾಮಿ ಮೇಲಿದೆ. ಎಚ್ ಡಿಕೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದರ ಮೇಲೆ ಎಲ್ಲರು ಕುತೂಹಲದಿಂದ ಕಾಯುತ್ತಿದ್ದಾರೆ.
ಮೇಯರ್, ಉಪ ಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಆಧ್ಯಕ್ಷರ ಆಯ್ಕೆ ಸೆಪ್ಟಂಬರ್ 28 ರಂದು ನಡೆಯಲಿದೆ, ಈ ಬಾರಿ ಮೇಯರ್ ಹುದ್ದೆ ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿದ್ದು, ಉಪ ಮೇಯರ್ ಹುದ್ದೆ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು, ಮೇಯರ್ ಹುದ್ದೆ ಪಡೆಯಲು ಹವಣಿಸುತ್ತಿವೆ. ಆದರೆ ಯಾರಿಗೆ ಬೆಂಬಲ ನೀಡಬೇಕು ಎಂಬುದನ್ನು ಪಕ್ಷ ಇನ್ನೂ ನಿರ್ಧರಿಸಿಲ್ಲ ಎಂದು ಜೆಡಿಎಸ್ ಶಾಸಕ ಶರವಣ ತಿಳಿಸಿದ್ದಾರೆ. ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಶರವಣ, ಮೇಯರ್ ಚುನಾವಣೆಗೆ ಇನ್ನೂ ಸಮಯ ಇರುವುದರಿಂದ ಯಾವುದೇ ಆತುರವಿಲ್ಲ, ಬಿಬಿಎಂಪಿಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡು 2 ಬಾರಿ ಕಾಂಗ್ರೆಸ್ ಪಕ್ಷವೇ ಮೇಯರ್ ಆಗಿದೆ. ಹಾಗಾಗಿ ಈ ಬಾರಿ ನಮಗೆ ಮೇಯರ್ ಪಟ್ಟ ನೀಡಬೇಕು ಎಂದು ಜೆಡಿಎಸ್ ಪಟ್ಟು ಹಿಡಿದಿದೆ.
ಬೆಂಬಲ ನೀಡಿದ ನಂತರ ಕಾಂಗ್ರೆಸ್ ನಮ್ಮನ್ನು ಮೂಲೆ ಗುಂಪು ಮಾಡುತ್ತದೆ ಎಂ0ದು ಆರೋಪಿಸಿದ್ದಾರೆ.
ಜೆಡಿಎಸ್ ಅನ್ನು ಪ್ರತಿನಿಧಿಸುಪ ವಾರ್ಡ್ ಗಳ ಸದಸ್ಯರಿಗೆ ಅನುದಾನ ಹಂಚಿಕೆಯಲ್ಲಿ ತಾರಮತ್ಯ ಮಾಡಲಾಗುತ್ತದೆ, ಕಾಂಗ್ರೆಸ್ ಸದಸ್ಯರಿರುವ ವಾರ್ಡ್ ಗಳಿಗೆ ಹೆಚ್ಚಿನ ಅನುದಾನ ಹಣ ನೀಡಲಾಗುತ್ತದೆ.
ಸಮನ್ವಯ ಸಮಿತಿ ರಚಿಸಲಾಗಿದ್ದು, ಇದುವರೆಗೂ ಒಂದು ಸಭೆಯನ್ನು ಕೂಡ ನಡೆಸಿಲ್ಲ, ನಾನು ಸಭೆಯ ಸದಸ್ಯನಾಗಿದ್ದೇನೆ, ಆದರೆ ಯಾರಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಮನಸ್ಸಿಗೆ ಬಂದಂಥೆ ನಿರ್ಧಾರ ಕೈಗೊಳ್ಳುತ್ತಾರೆ, ಹೀಗಿರುವಾಗ ಅವರಿಗೆ ನಾವು ಏಕೆ ಬೆಂಬಲ ನೀಡಬೇಕು ಎಂದು ಪ್ರಶ್ನಿಸಿದ್ದಾರೆ.
ಮೈತ್ರಿ ಮುಂದುವರಿಸುವ ಬಗ್ಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಕುಮಾರಸ್ವಾಮಿ ಮನವೋಲಿಸಲು ಯತ್ನಿಸುತ್ತಿದ್ದಾರೆ. ಗುರುವಾರ ಕುಮಾರಸ್ವಾಮಿ, ಪರಮೇಶ್ವರ್ ಮತ್ತು ಸುರೇಶ್ ಹಾಗೂ ನಾನು ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ಸೇರಬೇಕಿತ್ತು, ಆದರೆ ಕುಮಾರ ಸ್ವಾಮಿ, ಅನಾರೋಗ್ಯದ ಕಾರಣ ಭೇಟಿ ಮಾಡಲು ಸಾಧ್ಯವಾಗಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಜೆಡಿಎಸ್ ಗೆ ಮೇಯರ್ ಸ್ಥಾನ ನೀಡುವುದರ ಜೊತೆಗೆ 4 ಪ್ರಮುಖ ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಆದರೆ ಕಾಂಗ್ರೆಸ್ ಮುಖಂಡರು ಇದಕ್ಕೆ ಸಮ್ಮತಿಸಿಲ್ಲ, ಈ ಸಂಬಂಧ ಕುಮಾರ ಸ್ವಾಮಿ ಅವರನ್ನು ಪ್ರಶ್ನಿಸಿದರೇ, ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.
ಇನ್ನೂ ಬಿಜೆಪಿ ಕೂಡ ಮೇಯರ್ ಹುದ್ದೆ ಮೇಲೆ ಕಣ್ಣಿಟ್ಟಿದ್ದು.ಸೋಮವಾರ ಸಭೆ ಕರೆದಿದ್ದಾರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರಿಗಿಂತ ನಮ್ಮ ಸಂಖ್ಯೆ ಹೆಚ್ಚಾಗಿದೆ ಎಂದು ಬಿಬಿಎಂಪಿ ಕೌನ್ಸಿಲರ್ ಪದ್ಮನಾಭ ರೆಡ್ಡಿ ಹೇಳಿದ್ದಾರೆ. ನಾವು ಯಾರೋಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


