ಚಾಮುಂಡೇಶ್ವರಿಯಿಂದಲೇ ಸ್ಪರ್ಧೆ, ಏ.23ರಂದು ನಾಮಪತ್ರ ಸಲ್ಲಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಇದೇ ಏ.23ರಂದು ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಲಿದ್ದೇನೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

Published On :
ಮೈಸೂರು: "ಇದೇ ಏ.23ರಂದು ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಲಿದ್ದೇನೆ," ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಹಾರೋಹಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು "ನಾನು ಈ ಕ್ಷೇತ್ರದಿಂದ ಏಳು ಬಾರಿ ಸ್ಪರ್ಧಿಸಿ, ಐದು ಬಾರಿ ವಿಜೇತನಾಗಿದ್ದೇನೆ. ಇದೀಗ ಮುಖ್ಯಮಂತ್ರಿಯಾಗಿ ಇದೇ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದೇನೆ. ಜನರು ಆಶೀರ್ವದಿಸಿ" ಎಂದು ಮನವಿ ಮಾಡಿದ್ದಾರೆ.
"ಕೆಲವರು ನಾನು ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಿಲ್ಲ ಎನ್ನುವುದಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ನನ್ನ ಜೀವನದಲ್ಲಿ ಕಡೆಯ ಚುನಾವಣೆಯನ್ನು ನಾನು ಇದೇ ಕ್ಷೇತ್ರದಿಂದ ಎದುರಿಸಲು ನಿರ್ಧರಿಸಿದ್ದೇನೆ. ಯಾವ ಸುಳ್ಳು ಪ್ರಚಾರಕ್ಕೆ ಕಿವಿಗೊಡಲು ಹೋಗದಿರಿ" ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PoliticsರಾಜಕೀಯSiddaramaiahಸಿದ್ದರಾಮಯ್ಯnominationChamundeshwariನಾಮಪತ್ರಚಾಮುಂಡೇಶ್ವರಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


