ಅಮಿತ್ ಶಾ ಮತ್ತು ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಚುನಾವಣಾ ನೀತಿ ...

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಒಂದೂವರೆ ವರ್ಷದ ಹಿಂದೆ ಮೃತಪಟ್ಟಿದ್ದ ರಾಜುವಿನ ಕುಟುಂಬಕ್ಕೆ ಮೊನ್ನೆ ಮಾರ್ಚ್ 30ರಂದು 5 ಲಕ್ಷ ರೂಪಾಯಿ ಪರಿಹಾರ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಪರಿಹಾರ ನೀಡಿರುವುದು ಕೇವಲ ರಾಜುವಿನ ಕುಟುಂಬದವರನ್ನು ಚುನಾವಣೆ ಸಂದರ್ಭದಲ್ಲಿ ಮನವೊಲಿಸುವ ತಂತ್ರವಷ್ಟೆ ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಗ್ವಿ ಹೇಳಿಕೆಯಲ್ಲಿ ಹೇಳಿದ್ದಾರೆ.
ಚುನಾವಣೆಯಲ್ಲಿ ಸೋಲುವ ಭಯವಿರುವುದರಿಂದ ಬಿಜೆಪಿ ಮತದಾರರನ್ನು ಸೆಳೆಯಲು ಈ ರೀತಿ ಹಣ ನೀಡುತ್ತಿದೆ. ಕರ್ನಾಟಕದ ಜನರು ಮಾರಾಟಕ್ಕೆ ಇಲ್ಲ, ಮತದಾರರನ್ನು ಸೆಳೆಯಲು ಹಣಬಲ ತೋರಿಸುವುದರಿಂದ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಒಂದೂವರೆ ವರ್ಷ ಕಳೆದ ನಂತರ ಮೃತರಾದವರ ಕುಟುಂಬದವರನ್ನು ನೆನಪು ಮಾಡಿಕೊಂಡದ್ದೇಕೆ? ಅದು ಕೇವಲ ಚುನಾವಣಾ ಗಿಮಿಕ್ ಅಷ್ಟೆ.
ಬಿಜೆಪಿ ಕಾರ್ಯಕರ್ತ ಮೈಸೂರಿನ ರಾಜುವನ್ನು ಒಂದೂವರೆ ವರ್ಷದ ಹಿಂದೆ ಹತ್ಯೆ ಮಾಡಲಾಗಿತ್ತು. ಅಮಿತ್ ಶಾ ತಮ್ಮ ಇತ್ತೀಚಿನ ಭೇಟಿಯಲ್ಲಿ ರಾಜು ಕುಟುಂಬದವರನ್ನು ಭೇಟಿ ಮಾಡಿ ಪರಿಹಾರದ ಚೆಕ್ ವಿತರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


