ಕಮಲ ಪಾಳಯಕ್ಕೆ ಮಾಜಿ ಶಾಸಕ ನಾಗಪ್ಪ ಸಾಲೋಣಿ
ಮಾಜಿ ಶಾಸಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನಾಗಪ್ಪ ಸಾಲೋಣಿ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

Published On :
ಕನಕಗಿರಿ: ಮಾಜಿ ಶಾಸಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನಾಗಪ್ಪ ಸಾಲೋಣಿ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಸಾಲೋಣಿ ಅವರು ತನ್ನ ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಸೇರುವುದು ಖಚಿತವಾಗಿದ್ದು ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶಾಸಕ ಶಿವರಾಜ ತಂಗಡಗಿ ಗೆಲುವಿಗೆ ಟೊಂಕಕಟ್ಟಿ ನಿಂತಿದ್ದ ನಾಗಪ್ಪ ಸಾಲೋಣಿ ಕಮಲ ಪಾಳಯಕ್ಕೆ ಆಗಮಿಸುತ್ತಿರುವುದು ಪಕ್ಷಕ್ಕೆ ಹೊಸ ಬಲ ನೀಡಲಿದೆ ಎನ್ನಲಾಗಿದೆ.
ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಗುಂಪುಗಾರಿಕೆಯಿಂದ ಬೇಸತ್ತ ಸಾಲೋಣಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಹೀಗೆ ಪಕ್ಷಕ್ಕೆ ಸೇರುತ್ತಿರುವ ಹಿರಿಯ ಮುಖಂಡ ಯಾವ ಬೇಡಿಕೆಯನ್ನು ಮುಂದಿಟ್ಟಿಲ್ಲ ಕುರುಬ ಸಮುದಾಯದ ಪ್ರಭಾವಿ ನಾಯಕ ಸಾಲೋಣಿಯವರನ್ನು ಪಕ್ಷಕ್ಕೆ ಕರೆತರುವಲ್ಲಿ ಸಂಸದ ಸಂಗಣ್ಣ ಕರಡಿ ಅವರ ಪರಿಶ್ರಮವಿದೆ ಎನ್ನಲಾಗಿದೆ.
ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಏ.5ರಂದು ಸಾಲೋಣಿ ತಮ್ಮ ಬೆಂಬಲಿಗರೊಡನೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷಕ್ಕೆ ಈ ಬೆಳವಣಿಗೆ ದೊಡ್ಡ ಹೊಡೆತ ನಿಡಲಿದೆ ಎನ್ನಲಾಗಿದ್ದು ಮಾಜಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಭಾರೀ ಪೈಪೋಟಿ ಒಡ್ಡುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿಶಿವರಾಜ್ ತಂಗಡಗಿKarnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆNagappa SaloniShivaraj Tangadagiನಾಗಪ್ಪ ಸಾಲೋಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


