ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ರಾಜಿನಾಮೆ: ಬಿಜೆಪಿ ಸೇರುವ ಸಾಧ್ಯತೆ
ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಂಗಳವಾರ ಸ್ಪೀಕರ್ ಕೆ.ಬಿ ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ...

Published On :
ಹಾವೇರಿ: ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಮಂಗಳವಾರ ಸ್ಪೀಕರ್ ಕೆ.ಬಿ ಕೋಳಿವಾಡ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿರುವ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಗೆ ಸೇರುವ ಕುರಿತು ಕ್ಷೇತ್ರದಲ್ಲಿ ಯಾರದ್ದೂ ವಿರೋಧವಿಲ್ಲ. ಕ್ಷೇತ್ರದ ಬಿಜೆಪಿ ಮುಖಂಡರು ನನ್ನ ಜೊತೆಗಿದ್ದಾರೆ. ನಾಳೆ ನನ್ನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರು ಬಿಜೆಪಿಯವರಲ್ಲ. ಅವರೆಲ್ಲ ಕಾಂಗ್ರೆಸ್ ನವರು. ಅವರ ಮೇಲೆ ಈಗಾಗಲೆ ಪ್ರಕರಣವೂ ದಾಖಲಾಗಿದೆ. ಬಸವ ಕಲ್ಯಾಣಕ್ಕೆ ರಾಹುಲ್, ಸಿಎಂ ಸಿದ್ದರಾಮಯ್ಯ ಯಾರು ಬಂದರೂ ಸರಿಯೇ ನನ್ನ ಗೆಲವು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ResignJDSಶಾಸಕMLAರಾಜಿನಾಮೆಜೆಡಿಎಸ್ಮಲ್ಲಿಕಾರ್ಜುನ ಖೂಬಾMallikarjun khubaKarnataka Assembly Electionಕರ್ನಾಟಕ ವಿಧಾನ ಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


